ರಾಜ್ಯ

ಕಾಂಗ್ರೆಸ್‍ನಲ್ಲಿ ಎಲ್ಲವೂ ತಣ್ಣಗಿವೆ: ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು: ಕಾಂಗ್ರೆಸ್‍ನಲ್ಲಿ ಎಲ್ಲವೂ ತಣ್ಣಗಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶಾಸಕರ ಜೊತೆ ಸಭೆ ನಡೆಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎವೆರಿತಿಂಗ್ ಕೂಲ್ ಟುಡೇ ಸಭೆಯ ಚರ್ಚೆಗಳ ಬಗ್ಗೆ ನಾಳೆ ವಿವರವಾಗಿ ಮಾತನಾಡುತ್ತೇನೆ. ಬೆಂಗಳೂರಿನಿಂದ ಹೊರಡುವ ಮುನ್ನ ಸ್ಪಷ್ಟ ಮಾಹಿತಿ ನೀಡಿಯೇ ಹೋಗುತ್ತೇನೆ. ಎಲ್ಲದಕ್ಕೂ ವಿರಾಮ ಇದೆ ಎಂದು ಹೇಳಿದ್ದಾರೆ.

ದೆಹಲಿಯಿಂದ ಆಗಮಿಸಿದ ಸುರ್ಜೇವಾಲ ಮೂರು ದಿನಗಳ ಸಭೆಯಲ್ಲಿ ಶಾಸಕರ ಜೊತೆ ಸರಣಿ ಸಭೆಗಳನ್ನು ನಡೆಸಲಿದ್ದು, ಎರಡನೇ ಹಂತದಲ್ಲಿ 60 ಶಾಸಕರೊಂದಿಗೆ ಸಮಾಲೋಚನೆ ನಡೆಸುವ ನಿರೀಕ್ಷೆಯಿದೆ. ಜೊತೆಗೆ ಸಚಿವರ ಜೊತೆ ಕೂಡ ಮಾತುಕತೆ ನಡೆಸಲಿದ್ದಾರೆ.

ಕೆಲದಿನಗಳ ಹಿಂದೆ ಶಾಸಕರ, ಸಚಿವರ ಹೇಳಿಕೆಗಳಿಂದ ಪಕ್ಷದಲ್ಲಿ ಗೊಂದಲಗಳಾಗಿತ್ತು. ಅದಕ್ಕೆ ಕಡಿವಾಣ ಹಾಕಲು ಸುರ್ಜೇವಾಲ ರಾಜ್ಯಕ್ಕಾಗಮಿಸಿದ್ದಾರೆ. ಸಚಿವರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಕಾರ್ಯವೈಖರಿ ಬಗ್ಗೆ ಕೂಡ ಶಾಸಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದು, ರಾಜ್ಯ ರಾಜಕೀಯದ ಬಗ್ಗೆ ಸುರ್ಜೇವಾಲ ನೀಡುವ ವರದಿ ಕುತೂಹಲ ಕೆರಳಿಸಿದೆ. ಮೂರು ದಿನಗಳ ಸಭೆಯ ನಂತರ ಮುಂದಿನ ವಾರ ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆಯಿದೆ.

ಆಂದೋಲನ ಡೆಸ್ಕ್

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

3 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

3 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

3 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

3 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

4 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

4 hours ago