ಮುದ್ರಣ ಮಾಧ್ಯಮದ ಜೊತೆಗೆ ಪತ್ರಿಕಾ ವಿತರಕ ವೃತ್ತಿ ಕೂಡ ಶಾಶ್ವತ: ಕೆ.ವಿ.ಪಿ
ತುಮಕೂರು: ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಮುದ್ರಣ ಮಾಧ್ಯಮ ಚಿರಸ್ಥಾಯಿ. ಎಲ್ಲಿಯವರೆಗೂ ಮುದ್ರಣ ಮಾಧ್ಯಮ ಇರುತ್ತದೋ ಅಲ್ಲಿಯವರೆಗೂ ಪತ್ರಿಕಾ ವಿತರಕ ವೃತ್ತಿ ಕೂಡ ಶಾಶ್ವತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು.
ರಾಜ್ಯ ಪತ್ರಿಕಾ ವಿತರಕರ ಸಂಘ ಆಯೋಜಿಸಿದ್ದ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪುರಸ್ಕೃತ ವಿತರಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪತ್ರಿಕಾ ಕ್ಷೇತ್ರದಲ್ಲಿ ನಿರಂತರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಪತ್ರಿಕಾ ವಿತರಕರ ಶ್ರಮವನ್ನು ಗುರುತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತೀ ವರ್ಷ ಒಂದು ಪ್ರಶಸ್ತಿಯನ್ನು ವಿತರಕರಿಗೆ ಮೀಸಲಿಟ್ಟರು. ಕಾರ್ಮಿಕ ಇಲಾಖೆ ವಿತರಕರ ನಿವೃತ್ತಿ ವಯಸ್ಸನ್ನು 59 ವರ್ಷದಿಂದ ಹೆಚ್ಚಿಸಿ 70 ವರ್ಷಕ್ಕೆ ನಿಗಧಿ ಮಾಡಿರುವುದು ಸಚಿವ ಸಂತೋಷ್ ಲಾಡ್ ಅವರ ಕಾಳಜಿಗೆ ಉದಾಹರಣೆ ಎಂದರು.
ಪತ್ರಿಕಾ ವಿತರಕರ ಬದುಕಿಗೆ ಸ್ಪಂದಿಸುವ ವಿಚಾರದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶಂಬುಲಿಂಗ ಅವರ ಕಾಳಜಿ ಮತ್ತು ಶ್ರಮ ಶ್ಲಾಘನೀಯ ಎಂದು ಮೆಚ್ಚುಗೆ ಸೂಚಿಸಿದರು.
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಪ್ರಜಾ ಪ್ರಗತಿ ಸಂಪಾದಕರಾದ ನಾಗಣ್ಣ, ಬಾಲ ಭವನ ಅಧ್ಯಕ್ಷರಾದ ಬಿ.ಆರ್.ನಾಯ್ಡು , ವಿತರಕರ ಸಂಘದ ರಾಜ್ಯಾಧ್ಯಕ್ಷರಾದ ಶಂಬುಲಿಂಗ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…