Mysore
14
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಇನ್ನು ಮುಂದೆ ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡುವಂತಿಲ್ಲ: ಸೆಷನ್ಸ್ ನ್ಯಾಯಾಲಯ

ಮಂಡ್ಯ: ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಂದಿಸಲಾಗಿದ್ದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.

ಆರೋಪಿಯು ಇನ್ನು ಮುಂದೆ ಯಾವುದೇ ದ್ವೇಷ ಭಾಷಣ ಮಾಡುವಂತಿಲ್ಲ ಎಂದು ಎಚ್ಚರಿಕೆ ಸೆಷನ್‌ ನ್ಯಾಯಾಲಯ ತಾಕೀತು ನೀಡಿದೆ. ಒಂದು ವೇಳೆ ದ್ವೇಷ ಭಾಷಣ ಮಾಡಿ ದೂರು ದಾಖಲಾದರೆ ಈಗ ಸಿಕ್ಕಿರುವ ಜಾಮೀನು ರದ್ದಾಗುತ್ತದೆ ಎಂದು ನ್ಯಾಯಾಲು ತಿಳಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಪತ್ರಕರ್ತ ನವೀನ್ ಸೂರಿಂಜೆ, “ಇನ್ನು ಮುಂದೆ ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡುವಂತಿಲ್ಲ. ಆರೋಪಿಯು ಯಾವುದೇ ಕಾರಣಕ್ಕೂ ಇಂತಹ ಕೃತ್ಯವನ್ನು ಪುನರಾವರ್ತಿಸಬಾರದು. ದ್ವೇಷ ಭಾಷಣ ಮಾಡಿದ ಬಗ್ಗೆ ದೂರು ದಾಖಲಾದರೆ ಈಗ ಸಿಕ್ಕಿರುವ ಜಾಮೀನು ರದ್ದಾಗುತ್ತದೆ” ಎಂದು ಷರತ್ತು ವಿಧಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ಮುಂದೆ ಕಲ್ಲಡ್ಕ ಪ್ರಭಾಕರ್ ಭಟ್ ಎಲ್ಲೇ ದ್ವೇಷ ಭಾಷಣ ಮಾಡಿದರೂ ತಕ್ಷಣ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ. ನೀವು ದಾಖಲಿಸಿದ ಎಫ್‌ಐಆರ್ ಗೂ ಜಾಮೀನು ಸಿಗಲ್ಲ, ಈಗ ಶ್ರೀರಂಗಪಟ್ಟಣದಲ್ಲಿ ಸಿಕ್ಕಿರುವ ಜಾಮೀನೂ ರದ್ದಾಗುತ್ತದೆ. ಸ್ವಸ್ಥ ಸಮಾಜಕ್ಕಾಗಿ ಇಷ್ಟು ಮಾಡುವುದು ಅನಿವಾರ್ಯ” “ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಇರುವ ಹಲವು ಖಾಯಿಲೆಗಳು, ವಯಸ್ಪೂ ಸೇರಿದಂತೆ ಕೆಲ ವಿಷಯಗಳನ್ನು ಆಧರಿಸಿ ಕೋರ್ಟ್ ಜಾಮೀನು ನೀಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!