ದಾವಣಗೆರೆ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು, ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಜೆಪಿ ನಾಯಕರು ರಾಜ್ಯವನ್ನು ಕೊಳ್ಳೆಹೊಡೆದು ಹಣ ಹಾಗೂ ಆಸ್ತಿ ಮಾಡಿಕೊಂಡಿದ್ದಾರೆ. ಇಂತಹವರಿಂದ ರಾಜ್ಯ ಸರ್ಕಾರವನ್ನು ಕೆಡವಲು ಸಾಧ್ಯವಿಲ್ಲ. ಬಿಜೆಪಿ ನಾಯಕರ ಹಗರಣಗಳು ಒಂದೊಂದಾಗಿ ಬೆಳಕಿಗೆ ಬರಲಿವೆ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಶುದ್ಧಹಸ್ತರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಅವರಿಂದ ಕರ್ನಾಟಕಕ್ಕೆ ಒಳಿತಾಗಿದೆ. ರಾಜ್ಯಪಾಲರು ಸ್ವನಿರ್ಧಾರ ಕೈಗೊಳ್ಳದೇ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಬಿಜೆಪಿ ನಾಯಕರು ಮಾಡಿದ ದೊಡ್ಡ ಹಗರಣಗಳನ್ನು ಬಿಟ್ಟು ಮುಡಾ ಪ್ರಕರಣ ಹಿಡಿದುಕೊಂಡು ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಬರಲ್ಲ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…