Mysore
19
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಕುಮಾರಸ್ವಾಮಿಯನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ: ದೇವೇಗೌಡ

ಬೆಂಗಳೂರು:  ಜೆಡಿಎಸ್ ಪಕ್ಷ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.

ಭಾನುವಾರ ನಡೆದ ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಹೇಳಿದರು.

ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ. ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ಅವರು ಹೇಳಿದರು.

ಜೆಡಿಎಸ್ ಕುಟುಂಬ ಆಧಾರಿತ ಪಕ್ಷ ಎಂದು ಕಾಂಗ್ರೆಸ್ ಹೇಳುತ್ತದೆ. ಯಾರಾದರೂ ಒಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಹೋಗಿ ಅಲ್ಲಿ ಗೋಡೆಗಳ ಮೇಲೆ ನೇತು ಹಾಕಿರುವ ಫೋಟೋಗಳನ್ನು ಒಮ್ಮೆ ನೋಡಿ. ಕುಟುಂಬ ಆಧಾರಿತ ಪಾರ್ಟಿ ಯಾವುದು ಎನ್ನುವುದು ಗೊತ್ತಾಗುತ್ತದೆ ಎಂದು  ಹೇಳಿದರು.

ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳುವುದು ಬೇಡ. ಎಲ್ಲಾರೂ ಒಟ್ಟಾಗಿ ಪಕ್ಷ ವಹಿಸುವ ಕೆಲಸ ಮಾಡೋಣ ಎಂದು ಹೇಳಿದರು.

Tags:
error: Content is protected !!