ಬೆಂಗಳೂರು: ಜೆಡಿಎಸ್ ಪಕ್ಷ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಭಾನುವಾರ ನಡೆದ ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಹೇಳಿದರು.
ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ. ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ಅವರು ಹೇಳಿದರು.
ಜೆಡಿಎಸ್ ಕುಟುಂಬ ಆಧಾರಿತ ಪಕ್ಷ ಎಂದು ಕಾಂಗ್ರೆಸ್ ಹೇಳುತ್ತದೆ. ಯಾರಾದರೂ ಒಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಹೋಗಿ ಅಲ್ಲಿ ಗೋಡೆಗಳ ಮೇಲೆ ನೇತು ಹಾಕಿರುವ ಫೋಟೋಗಳನ್ನು ಒಮ್ಮೆ ನೋಡಿ. ಕುಟುಂಬ ಆಧಾರಿತ ಪಾರ್ಟಿ ಯಾವುದು ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದರು.
ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳುವುದು ಬೇಡ. ಎಲ್ಲಾರೂ ಒಟ್ಟಾಗಿ ಪಕ್ಷ ವಹಿಸುವ ಕೆಲಸ ಮಾಡೋಣ ಎಂದು ಹೇಳಿದರು.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…