R Ashok
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್ ಸರ್ಕಾರವನ್ನು ಕೂಡ ನಂಬುತ್ತಿಲ್ಲ ಎಂದರ್ಥ. ಸತ್ತಿರುವ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್‌ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋಶೂಟ್ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಾಗುವುದು. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದರು.
ಇದಕ್ಕಾಗಿಯೇ ಮೂರು ದಿನದ ಅಧಿವೇಶನ ಕರೆಯಲು ಆಗ್ರಹಿಸಿದ್ದೇನೆ. ಸರ್ಕಾರದ ತಪ್ಪಿಲ್ಲ ಎಂದಾದರೆ ಯಾರ ತಪ್ಪು ಎಂದು ಸರಿಯಾಗಿ ತಿಳಿಸಲಿ. ಅಕ್ಟೋಬರ್ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ. ಎಲ್ಲ ಶಾಸಕರು ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು 2028ಕ್ಕೆ ಇವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಡಿ.ಕೆ.ಶಿವಕುಮಾರ್ ಬಹಳ ಚಿಂತೆಯಲ್ಲಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…