ರಾಜ್ಯ

ಜಾತಿ ಜನಗಣತಿಗೆ ಯಾರ ವಿರೋಧವೂ ಇಲ್ಲ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಜಾತಿ ಜನಗಣತಿಯ ವೇಳೆ ಉಪಪಂಗಡಗಳ ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿಗೆ ಯಾರ ವಿರೋಧವೂ ಇಲ್ಲ. ಎಲ್ಲರೂ ಸ್ವಾಗತಿಸಿದ್ದಾರೆ. ಆದರೆ ಕೆಲವು ಜಾತಿಗಳವರು ಉದ್ಯೋಗ, ಶಿಕ್ಷಣದ ಮೀಸಲಾತಿಗಾಗಿ ಲಿಂಗಾಯತ ವೀರಶೈವ ಎಂದು ಬರೆಸದೆ ವೃತ್ತಿ ಆಧಾರಿತ ಜಾತಿಯ ಹೆಸರನ್ನು ನಮೂದಿಸುತ್ತಾರೆ ಎಂದರು.

ಯಾರು, ಯಾವುದೇ ಧರ್ಮವನ್ನಾದರೂ ಪಾಲನೆ ಮಾಡಲು ಅವಕಾಶ ಇದೆ. ಆದರೆ ಜಾತಿ ಜನಗಣತಿಯ ಸಂದರ್ಭದಲ್ಲಿ ಸ್ಪಷ್ಟವಾದ ನಮೂದು ಮಾಡುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಮಠಾಧೀಶರು, ಸಮುದಾಯದ ಮುಖಂಡರು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಜನರಲ್ಲಿ ತಿಳುವಳಿಕೆ ಮೂಡಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲೂ ಮತ್ತಷ್ಟು ಸಮಸ್ಯೆಗಳಾಗುತ್ತವೆ. ವೀರಶೈವ ಲಿಂಗಾಯತ ಸಮುದಾಯದಲ್ಲೇ 100ಕ್ಕೂ ಹೆಚ್ಚು ಒಳಪಂಗಡಗಳಿವೆ. ಎಲ್ಲರಿಗೂ ಸರಿಯಾದ ಮಾಹಿತಿ ನೀಡಿದರೆ ನೈಜ್ಯ ದತ್ತಾಂಶ ಸಿಗಲು ಸಾಧ್ಯ ಎಂದು ತಿಳಿಸಿದರು.

ಇನ್ನು ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಜಾನುವಾರುಗಳನ್ನು ಮೇಯಿಸಲು ನಿಯಮ ಬಾಹಿರವಾಗಿ ನಿಷೇಧ ಹೇರಲಾಗಿದೆ. ತಮಿಳುನಾಡು ಸೇರಿದಂತೆ ರಾಜ್ಯದ ಗಡಿಭಾಗಗಳಲ್ಲಿ ನೆರೆಯ ರಾಜ್ಯಗಳಿಂದ ಸಾವಿರಾರು ಸಂಖ್ಯೆಯ ಜಾನುವಾರುಗಳು ರಾಜ್ಯದ ಅರಣ್ಯ ಪ್ರದೇಶದೊಳಗೆ ಬರುತ್ತಿದ್ದು, ಇಲ್ಲಿನ ಹಸಿರು ಹುಲ್ಲುಗಾವಲನ್ನು ಬರಿದು ಮಾಡುತ್ತಿವೆ. ದಟ್ಟಾರಣ್ಯ ಪ್ರದೇಶದಲ್ಲಿರುವ ವನ್ಯಜೀವಿಗಳಿಗೆ ಆಹಾರದ ಕೊರತೆ ಎದುರಾಗುತ್ತಿದೆ ಎಂದರು.

ಈ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳ ಮೇವಿಗೆ ಅವಕಾಶ ನಿರಾಕರಿಸಲಾಗಿದೆ. ಇತ್ತೀಚೆಗೆ ತಾಯಿ ಹಾಗೂ ನಾಲ್ಕು ಮರಿಗಳ ವಿಷಪ್ರಾಶನ ಪ್ರಕರಣದಲ್ಲಿ ಜಾನುವಾರುಗಳ ಮೇವಿನ ಹಿನ್ನೆಲೆಯಿತ್ತು. ಹೀಗಾಗಿ ಅರಣ್ಯ ಕಾಯ್ದೆಯ ನಿಯಮಾವಳಿಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಬೆಳ್ಳಿ ಬರೋಬ್ಬರಿ 20 ಸಾವಿರ ರೂ.ಇಳಿಕೆ : ಚಿನ್ನದ ದರದಲ್ಲೂ ದಿಢೀರ್ 4 ಸಾವಿರ ರೂ ಕುಸಿತ

ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…

8 mins ago

ಟಿವಿಕೆ ವಿಜಯ್ ಪಕ್ಷಕ್ಕೆ ಸೀಟಿ ಗುರುತು ನೀಡಿದ ಆಯೋಗ

ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…

49 mins ago

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

59 mins ago

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ ಇರಲಿದೆ : ಸಿಎಂ

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…

1 hour ago

ಒಂದು ಎಕರೆಯಲ್ಲಿ 102 ವಿವಿಧ ಬೆಳೆ : ರೋಗರಹಿತ ಬೆಳೆಗಳ ತಳಿ ಪ್ರದರ್ಶನ

ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…

1 hour ago

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

3 hours ago