ರಾಜ್ಯ

ಸಿದ್ದು ಸ್ಪರ್ಧೆಗೆ ಯಾರ ವಿರೋಧವೂ ಇಲ್ಲ : ಬೈರತಿ ಸುರೇಶ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ವಿರೋಧವಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಪ್ರಧಾನಕಾರ್ಯದರ್ಶಿಗಳು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಸೇರಿದಂತೆ ಎಲ್ಲರೂ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣಕ್ಕೆ ಅನಿವಾರ್ಯ ಎಂದು ಹೇಳಿದ್ದಾರೆ. ಇದರಲ್ಲಿ ಯಾರೂ ವಿರೋಧ ಮಾಡಿಲ್ಲ ಮತ್ತು ಸಿದ್ದರಾಮಯ್ಯ ಅವರು ಮುಂದಿನ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ನಂಬಿಕೆ ನಮ್ಮದಾಗಿದೆ ಎಂದು ಹೇಳಿದರು.

ನಮ್ಮ ಪಕ್ಷದ ಶಾಸಕರಾಗಲೀ, ಮಂತ್ರಿಗಳಾಗಲೀ ಅಥವಾ ನಾಯಕರಾಗಲೀ ಯಾರೂ ಪಕ್ಷದ ವಿರುದ್ಧ, ನಾಯಕತ್ವದ ವಿರುದ್ಧ ಹೇಳಿಕೆಗಳನ್ನು ನೀಡಿಲ್ಲ. ಅವರೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪರವಾಗಿಯೇ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅವರು ತಿಳಿಸಿದರು.

ಇದನ್ನು ಓದಿ: ಗೃಹ ನಿರ್ಮಾಣದ ಕನಸು ನನಸಾಗಿಸುವಲ್ಲಿ ಸಹಕಾರ ವಲಯದ ಪಾತ್ರ ಶ್ಲಾಘನೀಯ : ಶಾಸಕ ಜಿ.ಟಿ. ದೇವೇಗೌಡ

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ನವೆಂಬರ್ ಕ್ರಾಂತಿ ಇರುವುದು ಬಿಜೆಪಿಯಲ್ಲಿ ಮಾತ್ರ. ಆ ಪಕ್ಷದ ರೀತಿಯಲ್ಲಿ ನಮ್ಮ ಕಾಂಗ್ರೆಸ್ ನಲ್ಲಿ ಯಾವುದೇ ಕಿತ್ತಾಟವಿಲ್ಲ. ಬಿಜೆಪಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಬಿ.ವೈ.ವಿಜಯೇಂದ್ರ ಅವರ ನಡುವೆಯೇ ಕಿತ್ತಾಟ ನಡೆಯುತ್ತಿದೆ ಎಂದು ಬೈರತಿ ಸುರೇಶ್ ಮಾರುತ್ತರ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನತೆಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಜನರು ಖುಷಿಯಾಗಿದ್ದಾರೆ. ನಮ್ಮದೇನಿದ್ದರೂ ಅಭಿವೃದ್ಧಿ ವಿಚಾರದಲ್ಲಿ ಕೆಲಸ ಮಾಡುವ ಸರ್ಕಾರವಾಗಿದೆ. ಹೈಕಮಾಂಡ್ ತನ್ನದೇ ಆದ ರೀತಿಯಲ್ಲಿ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡುತ್ತದೆ. ಶತಮಾನದ ಇತಿಹಾಸವಿರುವ ಕಾಂಗ್ರೆಸ್ ಹೈಕಮಾಂಡ್ ಸದೃಢವಾಗಿದ್ದು,. ಈ ಅನುಭವದ ಆಧಾರದಲ್ಲಿಯೇ ಎಲ್ಲಾ ಸಚಿವರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿರಬಹುದು ಎಂದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

5 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

6 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

6 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

6 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

8 hours ago