ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಅನವಶ್ಯಕವಾಗಿ ಯಾರಿಗೂ ಗ್ಯಾರಂಟಿ ನೀಡಬಾರದು ಎಂಬ ಚರ್ಚೆಯಾಗಿದೆ. ಆದರೆ ಗ್ಯಾರಂಟಿ ಯೋಜನೆಗಳಿಗೆ ಶಾಸಕರು ವಿರೋಧ ಮಾಡಿಲ್ಲ. ಜನರಿಗೆ ಗ್ಯಾರಂಟಿ ಬಗ್ಗೆ ತಿಳಿಸದಿದ್ದರೆ ಪ್ರಯೋಜನ ಆಗಲ್ಲ. ಜಿಲ್ಲೆಗಳಿಗೆ ನಾವು ಭೇಟಿ ಕೊಟ್ಟಾಗ ಗ್ಯಾರಂಟಿಗಳ ಬಗ್ಗೆ ಮಾತನಾಡಬೇಕೆಂದು ಸಭೆಯಲ್ಲಿ ಕೆಲವರು ಸೂಚಿಸಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಶಾಸಕರೇ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಹೇಳಿದ್ದಾರೆ.





