ರಾಜ್ಯ

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಅನವಶ್ಯಕವಾಗಿ ಯಾರಿಗೂ ಗ್ಯಾರಂಟಿ ನೀಡಬಾರದು ಎಂಬ ಚರ್ಚೆಯಾಗಿದೆ. ಆದರೆ ಗ್ಯಾರಂಟಿ ಯೋಜನೆಗಳಿಗೆ ಶಾಸಕರು ವಿರೋಧ ಮಾಡಿಲ್ಲ. ಜನರಿಗೆ ಗ್ಯಾರಂಟಿ ಬಗ್ಗೆ ತಿಳಿಸದಿದ್ದರೆ ಪ್ರಯೋಜನ ಆಗಲ್ಲ. ಜಿಲ್ಲೆಗಳಿಗೆ ನಾವು ಭೇಟಿ ಕೊಟ್ಟಾಗ ಗ್ಯಾರಂಟಿಗಳ ಬಗ್ಗೆ ಮಾತನಾಡಬೇಕೆಂದು ಸಭೆಯಲ್ಲಿ ಕೆಲವರು ಸೂಚಿಸಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್‌ ಶಾಸಕರೇ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago