Mysore
27
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಎಚ್‌.ಡಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಯಾರು ಆತಂಕ ಪಡಬೇಕಿಲ್ಲ : ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು : ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಆರೋಗ್ಯ ಹದಗೆಟ್ಟಿದಂತಿದೆ. ಯಾಕಂದ್ರೆ ಅವರ ಫೋಟೋವನ್ನು ನೋಡುತ್ತಿದ್ದರೆ ಕೈಗಳು ಸಣ್ಣದಾಗಿದ್ದು, ಮುಖದಲ್ಲಿ ಕಾಂತಿ ಕಾಣಿಸುತ್ತಿಲ್ಲ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ತೀವ್ರ ಚರ್ಚೆಗಳಾಗುತ್ತಿವೆ.

ಇನ್ನು ಈ ಬಗ್ಗೆ ಇದೀಗ ಸ್ವತಃ ಪುತ್ರ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಆರೋಗ್ಯ ಚೆನ್ನಾಗಿದೆ, ಯಾರೂ ಆತಂಕ ಪಡಬೇಕಿಲ್ಲ. ಕೊನೆ ಉಸಿರಿರುವವರೆಗೂ ಜನಸೇವೆಗೆ ಬದುಕನ್ನ ಮುಡಿಪಿಟ್ಟಿದ್ದಾರೆ. ದೇವೇಗೌಡರು ಸಹ ರಾಜಕೀಯದಿಂದ ವಿಶ್ರಾಂತಿ ತೆಗೆದುಕೊಂಡಿಲ್ಲ. ದೇವೇಗೌಡರ ಕುಟುಂಬಕ್ಕೆ ಜನರೇ ರಾಜಕೀಯ ಶಕ್ತಿ ತುಂಬಿದ್ದಾರೆ. ಅದನ್ನ ಜನರಿಗೆ ವಾಪಸ್ ಧಾರೆ ಎರೆಯುವ ಕೆಲಸ ಮಾಡಬೇಕಿದೆ. ಸಣ್ಣಪುಟ್ಟ ಏರುಪೇರಾಗಿದ್ದು ಸತ್ಯ, ಆದ್ರೆ ಈಗ ಚೇತರಿಕೆಯಾಗುತ್ತಿದೆ. ಇದರ ಮಧ್ಯೆ ಪ್ರತಿನಿತ್ಯ ಇಲಾಖೆಯ ಸಭೆಗಳನ್ನು ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

Tags:
error: Content is protected !!