ರಾಜ್ಯ

ಭಾರತವನ್ನು ಒಡೆಯುವ ಮಾತು ಯಾರೂ ಆಡಬಾರದು: ಪರಮೇಶ್ವರ್

ಬೆಂಗಳೂರು : ನಮ್ಮ ಭಾರತ ಭವ್ಯ ಭಾರತ. ನಮ್ಮ ಭಾರತವನ್ನು ಯಾರು ಒಡೆಯುವ ಮಾತು ಅಡಬಾರದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ.

ಪ್ರತ್ಯೇಕ ದಕ್ಷಿಣ ಭಾರತ ನಿರ್ಮಾಣ ಕುರಿತು ಸಂಸದ ಡಿ.ಕೆ ಸುರೇಶ್‌ ನೀಡಿದ ಹೇಳಿಕೆ ವಿಚಾರವಾಗಿ, ಡಿಕೆ ಸುರೇಶ್‌ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅಖಂಡ ಭಾರತ ನಿರ್ಮಮಾಣಕ್ಕೆ ಸಾವಿರಾರು ಜನರ ಜೀವ ಅರ್ಪಣೆಯಾಗಿದೆ. ಗಾಂಧೀಜಿ ಅವರಿಂದ ಹಿಡಿದು, ಅನೇಕ ಹೋರಾಟಗಾರರು ದೇಶವನ್ನು ಒಗ್ಗೂಡಿಸುವಲ್ಲಿ ಶ್ರಮಿಸಿದ್ದಾರೆ. ಅದರಲ್ಲಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದು, ನೂರಾರು ವರ್ಷಗಳ ಫಲವಾಗಿ ನಮಗೆ ಭವ್ಯ ಭಾರತ ನಿರ್ಮಾಣವಾಗಿದೆ. ಹೀಗಾಗಿ ಯಾರೇ ಆದರೂ ದೇಶವನ್ನು ಒಗ್ಗೂಡಿಸಲು ಮಾತನಾಡಬೇಕು, ಬದಲಾಗಿ ಒಡೆಯುವ ಮಾತು ಸರಿಯಲ್ಲ ಎಂದು ಪರೋಕ್ಷವಾಗಿ ಡಿಕೆ ಬ್ರದರ್ಸ್‌ಗೆ ತಿವಿದಿದ್ದಾರೆ.

ನಮ್ಮ ಭಾರತ ಭವ್ಯವಾದ ಭಾರತ. ಪಾಕಿಸ್ತಾನ ವಿಭಜನೆ ಆದಾಗ ನಾವು ಯಾರೂ ಹುಟ್ಟಿರಲಿಲ್ಲ. ಆದರೆ ಅದರ ಇತಿಹಾಸ ನಮಗೆ ಗೊತ್ತಿದೆ. ನಮ್ಮ ದೇಶ ಒಂದು ರಾಷ್ಟ್ರ ಒಂದು ದೇಶ ಅಂತಾನೇ ಇರಬೇಕು ಬೇಕು ಎಂದು ಗೃಹ ಸಚಿವ ಪರಮೇಶ್ವರ್‌ ಹೇಳೀದ್ದಾರೆ.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

5 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

5 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

6 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

9 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

12 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

12 hours ago