Mysore
22
overcast clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಬಿಜೆಪಿ ಬೆಳಗಾವಿ ಚಲೋಗೆ ಅನುಮತಿ ಕೊಡಲ್ಲ: ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಬಿಜೆಪಿ ಬೆಳಗಾವಿ ಚಲೋ ನಡೆಸಲು ನಾವು ಅನುಮತಿ ನೀಡಿಲ್ಲ. ಯಾವುದೇ ಕಾರಣಕ್ಕೂ ಬಿಜೆಪಿಯವರಿಗೆ ಬೆಳಗಾವಿ ಚಲೋ ನಡೆಸಲು ಅನುಮತಿ ಕೊಡಲ್ಲ. ಅದಕ್ಕೂ ಮೀರಿ ಅವರು ಬೆಳಗಾವಿ ಚಲೋ ಮಾಡಿದರೆ ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾವು ಕಾನೂನು ವ್ಯವಸ್ಥೆ ಸರಿ ಮಾಡುತ್ತೇವೆ. ಬಿಜೆಪಿ ಚಲೋಗೆ ಯಾವುದೇ ರೀತಿಯ ಅವಕಾಶವಿಲ್ಲ ಎಂದು ಹೇಳಿದರು.

ಇನ್ನು ವಿಧಾನಪರಿಷತ್‌ ಕಲಾಪದ ವೇಳೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು, ಅಶ್ಲೀಲ ಪದ ಬಳಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಆಡಿಯೋ, ವಿಡಿಯೋ ಪರಿಶೀಲಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಸಭಾಪತಿಯವರು ಮಾಧ್ಯಮಗಳಲ್ಲಿ ಬಂದ ಬಗ್ಗೆ ಪರಿಶೀಲಿಸುತ್ತಾರೆ. ಪೊಲೀಸರು ನಿಯಮಗಳ ಪ್ರಕಾರವೇ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಆದರೆ ಬಿಜೆಪಿಯವರು ಹಮ್ಮಿಕೊಂಡಿರುವ ಬೆಳಗಾವಿ ಚಲೋಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಲ್ಲ. ಒಂದು ವೇಳೆ ಚಲೋ ನಡೆಸಲು ಮುಂದಾದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಇದರಲ್ಲಿ ಯಾರೇ ತಪ್ಪು ಮಾಡಿದ್ರೂ ಅವರನ್ನು ಬಿಡುವ ಮಾತೇ ಇಲ್ಲ ಎಂದು ಖಡಕ್‌ ಎಚ್ಚರಿಕೆ ನೀಡಿದರು.

Tags: