ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಬಿಜೆಪಿ ಬೆಳಗಾವಿ ಚಲೋ ನಡೆಸಲು ನಾವು ಅನುಮತಿ ನೀಡಿಲ್ಲ. ಯಾವುದೇ ಕಾರಣಕ್ಕೂ ಬಿಜೆಪಿಯವರಿಗೆ ಬೆಳಗಾವಿ ಚಲೋ ನಡೆಸಲು ಅನುಮತಿ ಕೊಡಲ್ಲ. ಅದಕ್ಕೂ ಮೀರಿ ಅವರು ಬೆಳಗಾವಿ ಚಲೋ ಮಾಡಿದರೆ ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾವು ಕಾನೂನು ವ್ಯವಸ್ಥೆ ಸರಿ ಮಾಡುತ್ತೇವೆ. ಬಿಜೆಪಿ ಚಲೋಗೆ ಯಾವುದೇ ರೀತಿಯ ಅವಕಾಶವಿಲ್ಲ ಎಂದು ಹೇಳಿದರು.
ಇನ್ನು ವಿಧಾನಪರಿಷತ್ ಕಲಾಪದ ವೇಳೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು, ಅಶ್ಲೀಲ ಪದ ಬಳಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಆಡಿಯೋ, ವಿಡಿಯೋ ಪರಿಶೀಲಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಸಭಾಪತಿಯವರು ಮಾಧ್ಯಮಗಳಲ್ಲಿ ಬಂದ ಬಗ್ಗೆ ಪರಿಶೀಲಿಸುತ್ತಾರೆ. ಪೊಲೀಸರು ನಿಯಮಗಳ ಪ್ರಕಾರವೇ ಕೆಲಸ ಮಾಡುತ್ತಾರೆ ಎಂದು ಹೇಳಿದರು.
ಆದರೆ ಬಿಜೆಪಿಯವರು ಹಮ್ಮಿಕೊಂಡಿರುವ ಬೆಳಗಾವಿ ಚಲೋಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಲ್ಲ. ಒಂದು ವೇಳೆ ಚಲೋ ನಡೆಸಲು ಮುಂದಾದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಇದರಲ್ಲಿ ಯಾರೇ ತಪ್ಪು ಮಾಡಿದ್ರೂ ಅವರನ್ನು ಬಿಡುವ ಮಾತೇ ಇಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ…
ಬೆಂಗಳೂರು: 9823 ರೂ ಕೋಟಿ ಮೌಲ್ಯದ 9 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರಿ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದರ್ಶನ್ ಅವರು ನಾಡಿನ…
ನವದೆಹಲಿ: ಇನ್ನು ಮುಂದೆ ಐದು ಹಾಗೂ ಎಂಟನೇ ತರಗತಿಗಳಲ್ಲೂ ವಿದ್ಯಾರ್ಥಿಗಳನ್ನು ಫೇಲ್ ಮಾಡಬಹುದು ಎಂಬ ಹೊಸ ತಿದ್ದುಪಡಿಯನ್ನು ಕೇಂದ್ರ ಸರ್ಕಾರ…
ಮೈಸೂರು: ಸಿ.ಟಿ.ರವಿ ತಪ್ಪು ಮಾಡಿದ್ದರೆ ಸಭಾಪತಿಗಳು ಶಿಕ್ಷೆಯ ಬಗ್ಗೆ ತೀರ್ಮಾನ ಮಾಡಬೇಕು. ಆದರೆ ರಾಜ್ಯದಲ್ಲಿ ಆ ದಿನ ಸಿ.ಟಿ.ರವಿ ಅವರನ್ನು…