Mysore
29
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ ಚಿಂತನೆ ಇಲ್ಲ: ವಿ.ಸೋಮಣ್ಣ

ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಏನು ಹೇಳುತ್ತದೋ ಅದನ್ನು ಮಾಡಿಕೊಂಡು ಹೋಗುತ್ತೇನೆ. ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ ಚಿಂತನೆಯಿಲ್ಲ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮಲ್ಲಿ ವ್ಯಕ್ತಿಗಿಂತ ಪಾರ್ಟಿ ದೊಡ್ಡದು. ಪಾರ್ಟಿಗಿಂತ ದೇಶ ದೊಡ್ಡದು. ನಾನು ಪಕ್ಷದ ಶಿಸ್ತಿನ ಸಿಪಾಯಿ. ಹಾಗಾಗಿ ಹೈಕಮಾಂಡ್‌ ಹೇಳಿದಂತೆ ನಾನು ಕೇಳುತ್ತೇನೆ ಎಂದು ಹೇಳಿದರು.

 

Tags:
error: Content is protected !!