ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿ ಸ್ಪೋಟಿಸಲು ಉಗ್ರರು ಸಂಚು ರೂಪಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶ ವಿರೋಧಿ ಚಟುವಟಿಕೆಗಳಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದ್ದಾರೆ.
ಬಿಜೆಪಿ ಕಚೇರಿ ಬ್ಲಾಸ್ಟ್ಗೆ ಸಂಚು ರೂಪಿಸಿದ್ದ ಸಂಬಂಧ ಉಗ್ರರ ಕೃತ್ಯದ ಬಗ್ಗೆ ಚಾರ್ಜ್‌ಶೀಟ್ ಬಂದಿದೆ. ದೇಶ ವಿರೋಧಿ ಚಟವಟಿಕೆಯಲ್ಲಿ ರಾಜಕಾರಣ ಮಾಡಬೇಡಿ.
ರಾಮೇಶ್ವರಂ ಕೆಫೆಯಲ್ಲಿ ಉಗ್ರರು ಸ್ಫೋಟ ನಡೆಸಿದ್ದನ್ನು ಮಲ್ಲಿಕಾರ್ಜುನ ಖರ್ಗೆ ಸಿಲಿಂಡರ್ ಬ್ಲಾಸ್ಟ್ ಎಂದಿದ್ದರು.
ಪಾಕ್ ಪರ ಘೋಷಣೆ ಕೂಗಿದರೂ ಕೂಗಿಲ್ಲ ಎಂದಿದ್ದರು. ಹೀಗಾಗಿ ದೇಶ ವಿರೋಧಿ ಚಟುವಟಿಕೆಗಳಲ್ಲಿ ರಾಜಕಾರಣ ಮಾಡೋದು ಬೇಡ ಎಂದು ಸಲಹೆ ನೀಡಿದ್ದಾರೆ.