ಬೆಂಗಳೂರು : ಬಸ್ ಟಿಕೆಟ್ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಭಾನುವಾರ ಮಾಧ್ಯಮಗಳ ಜೊತೆ ರಾಜು ಕಾಗೆ ಮತ್ತು KSRTC ನಿಗಮದ ಅಧ್ಯಕ್ಷ ಶ್ರೀನಿವಾಸ್ ಅವರು ಬಸ್ ಟಿಕೆಟ್ ದರ ಏರಿಕೆ ಮಾಡಲು ಚಿಂತನೆ ನಡೆಸಿದ್ದೇವೆ ಎಂದು ಮಾತನಾಡಿದ್ದರು.
ಹೀಗಾಗಿ ವಿಧಾನಸೌಧದಲ್ಲಿ ಬಸ್ ಟಿಕೆಟ್ ದರ ಏರಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಜು ಕಾಗೆ ಬಸ್ ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ತಿಳಿಸಿದರು.





