ರಾಜ್ಯ

ಬಸ್ ಟಿಕೆಟ್ ದರ ಏರಿಕೆ ಸದ್ಯಕ್ಕೆ ಇಲ್ಲ ; ರಾಮಲಿಂಗಾರೆಡ್ಡಿ

ಬೆಂಗಳೂರು : ಬಸ್‌ ಟಿಕೆಟ್‌ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ ಎಂದು  ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಭಾನುವಾರ ಮಾಧ್ಯಮಗಳ ಜೊತೆ ರಾಜು ಕಾಗೆ ಮತ್ತು KSRTC ನಿಗಮದ ಅಧ್ಯಕ್ಷ ಶ್ರೀನಿವಾಸ್‌  ಅವರು ಬಸ್‌ ಟಿಕೆಟ್‌ ದರ ಏರಿಕೆ ಮಾಡಲು ಚಿಂತನೆ ನಡೆಸಿದ್ದೇವೆ ಎಂದು ಮಾತನಾಡಿದ್ದರು.

ಹೀಗಾಗಿ ವಿಧಾನಸೌಧದಲ್ಲಿ ಬಸ್‌ ಟಿಕೆಟ್‌ ದರ ಏರಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಜು ಕಾಗೆ ಬಸ್‌ ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್‌ ಟಿಕೆಟ್‌ ದರ ಏರಿಕೆ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ತಿಳಿಸಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

7 mins ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

50 mins ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

1 hour ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

2 hours ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

2 hours ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

3 hours ago