ರಾಜ್ಯ

ಹಿಜಾಬ್‌ ನಿಷೇಧ ವಾಪಾಸ್‌ ವಿರೋಧಿಸಿ ಪ್ರತಿಭಟನೆ ಬೇಡ: ಬಿಎಸ್‌ ಯಡಿಯೂರಪ್ಪ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್‌ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್‌ ಸರ್ಕಾರ ವಾಪಾಸ್‌ ಪಡೆದ ಬೆನ್ನಲ್ಲೇ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸುವ ಕುರಿತು ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು, ಈ ಬಗ್ಗೆ ಹೋರಾಟ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.

ನೆನ್ನೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಜಾಬ್‌ ನಿಷೇಧವನ್ನು ವಾಪಾಸ್‌ ಪಡೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು.

ಇಂದು (ಶನಿವಾರ) ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಭಂಡ ಸರ್ಕಾರವಾಗಿದೆ. ತಾವು ನೀಡಿದ ಗ್ಯಾರೆಂಟಿ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸದೇ ಈ ರೀತಿಯ ಕೆಲಸಕ್ಕೆ ಕೈಹಾಕಿ ಜನರ ದಿಕ್ಕು ತಪ್ಪಿಸುತ್ತಿದೆ. ಇದನ್ನು ಯಾರು ಒಪ್ಪುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರ ಹಿಜಾಬ್‌ ನಿಷೇಧ ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ.

ಹಿಜಾಬ್‌ ನಿಷೇಧ ಮಾಡುವಂತೆ ಯಾವ ಮುಸ್ಲಿಂ ನಾಯಕರು ಕೇಳಿದ್ದರು? ಇಂತಹ ದೊಂಬರಾಟಗಳನ್ನು ಸಿಎಂ ಬಿಡಬೇಕು. ಶಾಲಾ, ಕಾಲೇಜುಗಳಲ್ಲಿ ಸಮವಸ್ತ್ರ ಸಮನಾಗಿರಬೇಕು. ಹಿಜಾಬ್‌ ನಿಷೇಧ ಮೂಲಕ ಅಲ್ಪಸಂಖ್ಯಾತರನ್ನು ತೃಪ್ತಿಪಡಿಸುವ ಕೆಲಸವನ್ನು ಸರ್ಕಾರ ಬಿಡಬೇಕು ಎಂದು ಹೇಳಿದರು.

andolanait

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

1 hour ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

2 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

2 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

2 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

2 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

16 hours ago