ಬೆಂಗಳೂರು: ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ ಪ್ರಾಸಿಕ್ಯೂಷನ್ ನಿರ್ಣಯವನ್ನು ಕ್ಯಾಬಿನೆಟ್ ಖಂಡಿಸಿದ್ದು, ಇಡೀ ಪಕ್ಷ ಮುಖ್ಯಮಂತ್ರಿಗಳ ಪರವಾಗಿ ನಿಂತು ನ್ಯಾಯಕ್ಕಾಗಿ ಹೋರಾಡಿ ಗೆಲ್ಲುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಯಾಬಿನೆಟ್ ನೋಟ್ ನಲ್ಲಿ ನಾವು ತಿಳಿಸಿದ್ದ ಕಾನೂನಾತ್ಮಕ ಸಂಗತಿಗಳನ್ನು ರಾಜ್ಯಪಾಲರು ಪರಿಗಣಿಸದಿರುವುದು ರಾಜ್ಯಪಾಲರ ದುರುದ್ದೇಶವನ್ನು ಹಾಗೂ ರಾಜಭವನದ ದುರುದ್ದೇಶವನ್ನು ಎತ್ತಿ ತೋರಿಸುತ್ತಿದೆ. ಈ ನಿರ್ಣಯ ರಾಜಭವನವನ್ನು ದುರಪಯೋಗ ಮಾಡಿಕೊಂಡು ಹೊರಡಿಸಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ ಅವರು, ತುಂಗ ಭದ್ರಾ ಡ್ಯಾಂಗೆ 5 ಗೇಟುಗಳ ಯಶಸ್ವಿ ಅಳವಡಿಕೆಗೆ ಕೃತಜ್ಞತೆ ಸಲ್ಲಿಸಿದರು. ರಾಜ್ಯದ ಜನತೆ, ರಾಜ್ಯದ ರೈತರ ಪರವಾಗಿ ಕನ್ನಯ್ಯ ನಾಯ್ಡು ಮತ್ತು ಅಧಿಕಾರಿಗಳು, ಎಂಜಿನಿಯರ್ ಗಳು, ಸಿಬ್ಬಂದಿ, ಕಾರ್ಮಿಕರಿಗೆ ಧನ್ಯವಾದಗಳು ಎಂದು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…