ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ವರದಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೂ ಗೊತ್ತಿಲ್ಲದೇ ನಾನು ಪ್ರತಿಕ್ರಿಯೆ ನೀಡಲು ಆಗಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಜಾತಿ ಗಣತಿ ವರದಿ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ಈಗ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಈ ಬೆಳವಣಿಗೆಗಳ ನಡುವೆ ಜಾತಿ ಗಣತಿ ವರದಿ ವಿಚಾರ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನನಗೆ ವರದಿ ಸಿಕ್ಕಿಲ್ಲ. ಹೀಗಾಗಿ ಅದರಲ್ಲಿರುವ ಅಂಶಗಳ ಬಗ್ಗೆ ಮಾಹಿತಿ ಇಲ್ಲ. ಜಾತಿಜನಗಣತಿಯ ಬಗ್ಗೆ ವಿಚಾರ ತಿಳಿಯದೆ ತಾವು ಪ್ರತಿಕ್ರಿಯಿಸುವುದಿಲ್ಲ ಎಂದರು.
ಇದೇ ಏಪ್ರಿಲ್.17ರಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಅಂದು ಸ್ಪಷ್ಟವಾಗಿ ನಿರ್ಧಾರಗಳನ್ನು ತೆಗೆದುಕೊಂಡರೆ ಆಗ ನಾನು ಪ್ರತಿಕ್ರಿಯಿಸುತ್ತೇನೆ. ಅದಕ್ಕೂ ಮುಂಚೆ ಏನನ್ನೂ ಹೇಳಲು ಬಯಸುವುದಿಲ್ಲ ಎಂದು ಹೇಳಿದರು.
ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮಳೆರಾಯ ಅಬ್ಬರಿಸಿ, ಬೊಬ್ಬಿರಿದಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ತರಿಸಿದ್ದಾನೆ. ಆದರೆ ರಾಜ್ಯದ ಪ್ರಮುಖ…
ದಾವಣಗೆರೆ: ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದು, ಅವರಿಗೆ ಜಾತಿ ಗಣತಿ ವಿಚಾರದಲ್ಲಿ ಪ್ರಾಮಾಣಿಕತೆ ಇಲ್ಲ ಎಂದು ರಾಜ್ಯ…
ಬೆಂಗಳೂರು: ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.…
ಬೆಂಗಳೂರು: ಜಾತಿಗಣತಿಯಲ್ಲಿ ಮೂಲಪ್ರತಿಗಳು ಲಭ್ಯವಿಲ್ಲ ಎಂಬ ಆರೋಪ ನಿರಾಧಾರ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಪ್ಪು ಹೇಳಿಕೆ ನೀಡಬಾರದು ಎಂದು…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…
ಯಶ್ ಅವರು ರಾಮಾಯಣ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಮೊದಲ ಭಾಗ 2026ರ ದೀಪಾವಳಿಗೆ ಪ್ರಾರಂಭವಾಗಲಿದೆ.…