ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಆರ್‌ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಿಲ್ ಸೋಸಲೆಗೆ ಸಂಕಷ್ಟ ಎದುರಾಗಿದೆ.
ನಿಖಿಲ್ ಸೋಸಲೆ ಪತ್ನಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಕರಣದ ವರದಿ ಇನ್ನೂ ಬಂದಿಲ್ಲ. ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ವಿಚಾರಣೆಯನ್ನು ಮುಂದೂಡಿದೆ.
ಅರ್ಜಿಯನ್ನು ಜೂನ್.9ರ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.





