Mysore
19
few clouds

Social Media

ಬುಧವಾರ, 07 ಜನವರಿ 2026
Light
Dark

ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್‌ ಪಕ್ಷ ಇಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ

Change in State Politics is Certain: Minister K.N. Rajanna

ಬೆಂಗಳೂರು: ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್‌ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು. ಸಿಎಲ್‌ಪಿ ಸಭೆಯಲ್ಲಿಯೇ ಈ ಬಗ್ಗೆ ತೀರ್ಮಾನವಾಗಬೇಕು ಎಂದು ಹೇಳಿದರು.

ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್‌ ಪಕ್ಷ ಇಲ್ಲ. ಅಂದು ದೇವರಾಜ ಅರಸು ಸಿಎಂ ಆಗಿದ್ದಾಗ ಎಂಎಲ್‌ಎ ಆಗಿರಲಿಲ್ಲ. ಅಂದು ಅವರು ಶಾಸಕರ ಬೆಂಬಲದಿಂದ ಸಿಎಂ ಆದರು. ಆದರೆ ಸಿದ್ದರಾಮಯ್ಯನವರಿಗೆ ಶಾಸಕರ ಬೆಂಬಲ ಇದೆ ಎಂದು ಹೇಳಿದರು.

ಇನ್ನು ಈಗ ಯಡಿಯೂರಪ್ಪ ಇಲ್ಲದಿದ್ದರೆ ಬಿಜೆಪಿ ಇಲ್ಲ. ಯಡಿಯೂರಪ್ಪ ರಾಜಕೀಯದಲ್ಲಿದ್ದಾಗ ಬಿಜೆಪಿಗೆ ಅವಕಾಶವಿತ್ತು. ಹಾಗೇ ದೇವೇಗೌಡರು, ಅವರ ಕುಟುಂಬ ಇಲ್ಲ ಅಂದರೆ ಜೆಡಿಎಸ್‌ ಪಕ್ಷ ಇಲ್ಲ. ಹಾಗೇ ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್‌ ಇಲ್ಲ ಎಂದು ಹೇಳಿದರು.

 

Tags:
error: Content is protected !!