ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು.
ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಡತನ ನಿರ್ಮೂಲನೆಯಾಗಬೇಕು. ಜನ ಸಮುದಾಯ ಶಾಂತಿ, ನೆಮ್ಮದಿಯಿಂದ ಜೀವನ ನಡೆಸಬೇಕು. ಹಳ್ಳಿಗಾಡಿನ ಯುವಕರು ಹೆಚ್ಚು ವಿದ್ಯಾವಂತರಾಗಿ, ದೇಶವನ್ನು ಕಟ್ಟುವಂತಾಗಬೇಕು ಎಂದು ಹೇಳಿದರು.
ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಯಾವುದೇ ರೀತಿಯ ಟೀಕೆಗಳಿಗೆ ಜಗ್ಗದೇ ಕೆಲಸ ಮಾಡುತ್ತಿದೆ. ರಾಜ್ಯದ ಜನರನ್ನು ಅಭಿವೃದ್ಧಿಯ ಕಡೆ ತೆಗೆದುಕೊಂಡು ಹೋಗುವುದೇ ಸರ್ಕಾರದ ಜವಾಬ್ದಾರಿ ಎಂದು ತಿಳಿಸಿದರು.





