ಬೆಂಗಳೂರು: ತಮಿಳುನಾಡಿಗೆ ಬಿಡುವಷ್ಟು ನೀರು ಕರ್ನಾಟಕದ ಜಲಾಶಯಗಳಲ್ಲಿ ಇಲ್ಲ. ಹೆಚ್ಚು ಮಳೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮಲ್ಲಿ ನೀರಿಲ್ಲ. ಮಳೆಯಿಲ್ಲ. ಮಳೆಗಾಗಿ ಪ್ರಾರ್ಥಿಸೋಣ. ನಮ್ಮಲ್ಲಿ ಕೆರೆಗಳನ್ನು ತುಂಬಿಸಲು ಕೂಡ ನೀರಿಲ್ಲ. ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳ ಒಳಹರಿವು ಕಡಿಮೆಯಿದೆ ಎಂದರು.
ಕರ್ನಾಟಕದಲ್ಲಿ ನೀರಿನ ಕೊರತೆ ಬಹಳಷ್ಟಿದ್ದು, ಈ ಬಾರಿಯ ಮಾನ್ಸೂನ್ ಕೂಡ ಸರಿಯಾಗಿ ಆಗಿಲ್ಲ. ರಾಜ್ಯದಲ್ಲಿ ಶೇಕಡಾ.28ರಷ್ಟು ಮಳೆ ಕೊರತೆಯಿದೆ. ಹೀಗಾಗಿ ನೀರು ಬಿಡಲು ಆಗುವುದಿಲ್ಲ.
ಆದ್ದರಿಂದ ಜಲಾಶಯಗಳು ತುಂಬಬೇಕಾದರೆ ಮಳೆ ಆಗಬೇಕು. ಆದ್ದರಿಂದ ಮಳೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಡಿಕೆಶಿ ಮನವಿ ಮಾಡಿದ್ದಾರೆ.
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…