Mysore
21
overcast clouds
Light
Dark

ತೆಮಿಳುನಾಡಿಗೆ ನೀರು ಬಿಟ್ಟಿಲ್ಲ : ಡಿ.ಕೆ.ಶಿವಕುಮಾರ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ. ಇದೆಲ್ಲ ಸುಳ್ಳು ಆರೋಪವಾಗಿದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಮಗೂ ನೀರಿನ ವಿಚಾರದಲ್ಲಿ ಜವಾಬ್ದಾರಿ ಇದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಮಾತ ಕೇಳಿದಾಗ, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು ಎಂದಿದ್ದಾರೆ.

ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ತಮಿಳುನಾಡಿಗೆ ಹೋಗುವ ಪ್ರತಿಯೊಂದು ನೀರಿನ ಲೆಕ್ಕ ದಾಖಲಾಗಿರುತ್ತದೆ.

ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಾವು ನೀರಿನ ವಿಚಾರದಲ್ಲಿ ಜವಾಬ್ದಾರಿ ಹೊಂದಿದ್ದೇವೆ. ಕಾವೇರಿ ಭಾಗದ ರೈತರನ್ನು ನಾವು ಈ ಹಿಂದೆಯೂ ಕಾಪಾಡಿದಿದ್ದೇವೆ. ಈಗಲೂ ಕಾಪಾಡುತ್ತಿದ್ದೇವೆ.

ತಮಿಳುನಾಡು ನೀರು ಕೇಳುತ್ತಿಲ್ಲದಿರುವಾಗ ನಾವು ಯಾಕೆ ಅವರಿಗೆ ನೀರನ್ನು ಬಿಡೋಣ? ಕುಡಿಯುವ ನೀರಿನ ಪೂರೈಕೆ ನಮ್ಮ ಸರ್ಕಾರದ ಮೊದಲ ಆದ್ಯತೆ.

ಶಿವ ಡ್ಯಾಂ ನಲ್ಲಿ ನೀರಿನ ಮಟ್ಟ 2 ಅಡಿ ಕಡಿಮೆ ಇದ್ದ ಕಾರಣ ಬೆಂಗಳೂರಿಗೆ ಪೂರೈಸಲು ನೀರನ್ನು ಪಂಪ್ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಕೊರತೆಯನ್ನು ತುಂಬಲು ಬಿಡಬ್ಲ್ಯೂಎಸ್‌ಎಸ್ ಬಿ ಮನವಿ ಮೇರೆಗೆ ಕೆಆರ್ ಎಸ್ ನಿಂದ ನೀರು ಹರಿಸಿದ್ದೇವೆಯೇ ಹೊರತು, ತಮಿಳುನಾಡಿಗೆ ನೀರು ಹರಿಸಿಲ್ಲ ಎಂದರು

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ