ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ. ಇದೆಲ್ಲ ಸುಳ್ಳು ಆರೋಪವಾಗಿದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಮಗೂ ನೀರಿನ ವಿಚಾರದಲ್ಲಿ ಜವಾಬ್ದಾರಿ ಇದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಮಾತ ಕೇಳಿದಾಗ, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು ಎಂದಿದ್ದಾರೆ.
ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ತಮಿಳುನಾಡಿಗೆ ಹೋಗುವ ಪ್ರತಿಯೊಂದು ನೀರಿನ ಲೆಕ್ಕ ದಾಖಲಾಗಿರುತ್ತದೆ.
ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಾವು ನೀರಿನ ವಿಚಾರದಲ್ಲಿ ಜವಾಬ್ದಾರಿ ಹೊಂದಿದ್ದೇವೆ. ಕಾವೇರಿ ಭಾಗದ ರೈತರನ್ನು ನಾವು ಈ ಹಿಂದೆಯೂ ಕಾಪಾಡಿದಿದ್ದೇವೆ. ಈಗಲೂ ಕಾಪಾಡುತ್ತಿದ್ದೇವೆ.
ತಮಿಳುನಾಡು ನೀರು ಕೇಳುತ್ತಿಲ್ಲದಿರುವಾಗ ನಾವು ಯಾಕೆ ಅವರಿಗೆ ನೀರನ್ನು ಬಿಡೋಣ? ಕುಡಿಯುವ ನೀರಿನ ಪೂರೈಕೆ ನಮ್ಮ ಸರ್ಕಾರದ ಮೊದಲ ಆದ್ಯತೆ.
ಶಿವ ಡ್ಯಾಂ ನಲ್ಲಿ ನೀರಿನ ಮಟ್ಟ 2 ಅಡಿ ಕಡಿಮೆ ಇದ್ದ ಕಾರಣ ಬೆಂಗಳೂರಿಗೆ ಪೂರೈಸಲು ನೀರನ್ನು ಪಂಪ್ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಕೊರತೆಯನ್ನು ತುಂಬಲು ಬಿಡಬ್ಲ್ಯೂಎಸ್‌ಎಸ್ ಬಿ ಮನವಿ ಮೇರೆಗೆ ಕೆಆರ್ ಎಸ್ ನಿಂದ ನೀರು ಹರಿಸಿದ್ದೇವೆಯೇ ಹೊರತು, ತಮಿಳುನಾಡಿಗೆ ನೀರು ಹರಿಸಿಲ್ಲ ಎಂದರು
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…
ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…
ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…
‘ಸಾಮ್ರಾಜ್ಯಶಾಹಿ ದಾಳಿ ಹಾಗೂ ಅದರ ಪರಿಣಾಮಗಳು’ ಕುರಿತ ವಿಚಾರಸಂಕಿರಣ ಹೊಸದಿಲ್ಲಿ: ಪಶ್ಚಿಮ ಏಷ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬದಲಾದ…
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…