ರಾಜ್ಯ

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ವೇಳೆ ನಾವು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ತೀರ್ಮಾನಿಸಿಲ್ಲ. ಬದಲಿಗೆ ಕಾಂಗ್ರೆಸ್ ಸರ್ಕಾರದ ವೈಫಲ್ಯದ ಬಗ್ಗೆ ಸದನದಲ್ಲಿ ಗಮನಸೆಳೆಯಲು ನಿರ್ದೇಶಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಎರಡೂವರೆ ವರ್ಷಗಳ ಸರ್ಕಾರದ ಆಡಳಿತ ವೈಖರಿಯಿಂದ ಸ್ವಪಕ್ಷದ ಶಾಸಕರೇ ಬೇಸತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅಚ್ಚರಿಯಿಲ್ಲ ಎಂದು ಹೇಳಿದರು.

ಸರ್ಕಾರದಲ್ಲಿ ಶೇ.63ರಷ್ಟು ಭ್ರಷ್ಟಾಚಾರ ಬಗ್ಗೆ ಉಪಲೋಕಾಯುಕ್ತರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡುವ ಕೆಲಸ ಮಾಡಿದ್ದಾರೆ. ಉಪಲೋಕಾಯುಕ್ತರು ಏನು ಹೇಳಿದ್ದಾರೆ ಅದರ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‍ನವರು ಶೇ.40 ಕಮೀಷನ್ ಆರೋಪ ಮಾಡಿದ್ದರು. ತನಿಖಾ ಸಂಸ್ಥೆ ರಚನೆ ಮಾಡಿದರು. ಆದರೆ ಆರೋಪ ಸಾಬೀತಾಗಲಿಲ್ಲ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಬಗ್ಗೆ ನಿಮದೇ ಶಾಸಕರು ನಂಬರ್ ಒನ್ ಎಂದು ಹೇಳಿದ್ದಾರೆಂದು ವಾಗ್ದಾಳಿ ನಡೆಸಿದರು.

ವಾಲ್ಮೀಕಿ ಹಗರಣ ಬಗ್ಗೆ ಸದನದಲ್ಲಿ ಸ್ವತಃ ಸಿಎಂ ಅವರೇ ಒಪ್ಪಿಕೊಂಡಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ಎಂದು ಯಾವ ಬಾಯಿಂದ ಹೇಳುತ್ತಾರೆ ಎಂದು ಪ್ರಶ್ನೆ ಮಾಡಿದರು.

ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ತಯಾರಿ ಮಾಡಿಕೊಂಡಿದ್ದೇವೆ. ಮೈತ್ರಿ ಪಕ್ಷರ ಸದಸ್ಯರ ಜೊತೆ ಒಟ್ಟಿಗೆ ಕೂತು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರದ ವೈಫಲ್ಯ, ಜ್ವಲಂತ ಸಮಸ್ಯೆಗಳ ಬಗ್ಗೆ ಸದನದ ಗಮನ ಸೆಳೆಯಲು ನಿರ್ಧರಿಸಿದ್ದೇವೆ. ಪ್ರತಿ ಬಾರಿ ಅಲ್ಲಿ ಸದನ ನೆಡೆದಾಗಲೂ ಆ ಭಾಗದ ವಿಚಾರಗಳು ಚರ್ಚೆಗೊಳಪಡುತ್ತವೆ ಆದರೆ ಅದು ನಾಮಕೆವಸ್ತೇ ಎನ್ನುವಂತಿರುತ್ತದೆ. ಹೀಗಾಗಿ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಈ ಬಾರಿ ಸದನವನ್ನು ಬಳಸಿಕೊಳ್ಳಬೇಕಿದೆ ಎಂದರು.

ಸದನದ ಆರಂಭದಲ್ಲೇ ಈ ವಿಚಾರಗಳ ಚರ್ಚೆ ಮಾಡಲು ನಿರ್ಧರಿಸಿದ್ದೇವೆ. ಮೆಕ್ಕೆಜೋಳ, ತೊಗರಿ,ಕಬ್ಬು, ಭತ್ತ ಖರೀದಿ, ತುಂಗಭದ್ರಾ ಜಲಾಶಯಕ್ಕೆ ಕ್ರಸ್ಟ್ ಗೇಟ್ ಅಳವಡಿಕೆ ಹೀಗೆ ಎಲ್ಲ ವಿಚಾರಗಳ ಕುರಿತು ಸರ್ಕಾರದ ನಿಲುವನ್ನ ಪ್ರಶ್ನಿಸಲಿದ್ದೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

12 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

13 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

14 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

16 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

20 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

20 hours ago