ಬೆಂಗಳೂರು : ಜೆಡಿಎಸ್ ಎನ್ಡಿಎ ಜೊತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಇತ್ತ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿದ್ದಾರೆ. ಇದೀಗ ಕಾಂಗ್ರೆಸ್ ಸಹ ಕುಮಾರಸ್ವಾಮಿ ಕಾಲೆಳೆದಿದ್ದು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ಡಿ ಕುಮಾರಸ್ವಾಮಿಯವರು ಕೋಮುವಾದದ ಕಡೆ ಹೋಗುತ್ತಿರುವ ವೇಗ ನೋಡಿದರೆ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿಯಾಗಬೇಕಿಲ್ಲ ಎಂದು ಲೇವಡಿ ಮಾಡಿದೆ.
ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು ಆರ್ಎಸ್ಎಸ್ ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ಅವರು ಕೋಮುವಾದ ಕಡೆಗೆ ಹೋಗುತ್ತಿರುವ ವೇಗ ನೋಡಿದರೆ ಕಲವೇ ದಿನಗಳಲ್ಲಿ ಬಿಜೆಪಿಗಳನ್ನೇ ಓವರ್ ಟೇಕ್ ಮಾಡಿ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿ ಇಲ್ಲ ಎಂದು ಕುಮಾರಸ್ವಾಮಿ ಅವರ ಕಾಲೆಳೆದಿದೆ.
ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ ಎಂದಿರುವ ಕಾಂಗ್ರೆಸ್, ಬಿಜೆಪಿ ಹೈಕಮಾಂಡ್ ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ. ಅಲ್ಲದೇ ಎಚ್ಚರದಿಂದಿರಿ ಎಂದು ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಟ್ಯಾಗ್ ಮಾಡಿ ಹೇಳಿದೆ.
ಮೊನ್ನೇ ಅಷ್ಟೇ ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಆರ್ಎಸ್ಎಸ್ ಪ್ರಭಾಕರ್ ಭಟ್ ಅವರ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತಿರುವ ಪ್ರಭಾಕರ್ ಭಟ್ಟರ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು. ಹಾಗಾಗಿ ಈ ಹಿಂದೆ ಅವರನ್ನು ಏನೇನೋ ಟೀಕಿಸಿದ್ದೇನೆ. ಈಗ ನನ್ನಲ್ಲಿ ಪರಿವರ್ತನೆ ಆಗಿದೆ ಎಂದು ಪ್ರಭಾಕರ್ ಭಟ್ ಅವರನ್ನು ಗುಣಗಾನ ಮಾಡಿದ್ದರು.
ಈ ಗುಣಗಾನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದ್ದು, ಎಚ್‌ಡಿಕೆ ಟ್ರೋಲ್‌ಗೆ ಗುರಿಯಾಗಿದ್ದಾರೆ.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…