ರಾಜ್ಯ

ಎಚ್‌ಡಿಕೆ ಬಿಜೆಪಿ ಅಧ್ಯಕ್ಷರಾದರು ಅಚ್ಚರಿಯಿಲ್ಲ: ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು : ಜೆಡಿಎಸ್​​ ಎನ್​ಡಿಎ ಜೊತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಇತ್ತ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್​ ಆಗುತ್ತಿದ್ದಾರೆ. ಇದೀಗ ಕಾಂಗ್ರೆಸ್ ಸಹ ಕುಮಾರಸ್ವಾಮಿ ಕಾಲೆಳೆದಿದ್ದು, ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಎಚ್​ಡಿ ಕುಮಾರಸ್ವಾಮಿಯವರು ಕೋಮುವಾದದ ಕಡೆ ಹೋಗುತ್ತಿರುವ ವೇಗ ನೋಡಿದರೆ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿಯಾಗಬೇಕಿಲ್ಲ ಎಂದು​ ಲೇವಡಿ ಮಾಡಿದೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು ಆರ್​ಎಸ್​ಎಸ್​ ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ಅವರು ಕೋಮುವಾದ ಕಡೆಗೆ ಹೋಗುತ್ತಿರುವ ವೇಗ ನೋಡಿದರೆ ಕಲವೇ ದಿನಗಳಲ್ಲಿ ಬಿಜೆಪಿಗಳನ್ನೇ ಓವರ್​ ಟೇಕ್​ ಮಾಡಿ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿ ಇಲ್ಲ ಎಂದು ಕುಮಾರಸ್ವಾಮಿ ಅವರ ಕಾಲೆಳೆದಿದೆ.

ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ ಎಂದಿರುವ ಕಾಂಗ್ರೆಸ್, ಬಿಜೆಪಿ ಹೈಕಮಾಂಡ್​ ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ. ಅಲ್ಲದೇ ಎಚ್ಚರದಿಂದಿರಿ ಎಂದು ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಟ್ಯಾಗ್‌ ಮಾಡಿ ಹೇಳಿದೆ.

ಮೊನ್ನೇ ಅಷ್ಟೇ ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಆರ್​ಎಸ್​ಎಸ್​ ಪ್ರಭಾಕರ್ ಭಟ್ ಅವರ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತಿರುವ ಪ್ರಭಾಕರ್ ಭಟ್ಟರ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು. ಹಾಗಾಗಿ ಈ ಹಿಂದೆ ಅವರನ್ನು ಏನೇನೋ ಟೀಕಿಸಿದ್ದೇನೆ. ಈಗ ನನ್ನಲ್ಲಿ ಪರಿವರ್ತನೆ ಆಗಿದೆ ಎಂದು ಪ್ರಭಾಕರ್ ಭಟ್​ ಅವರನ್ನು ಗುಣಗಾನ ಮಾಡಿದ್ದರು.

ಈ ಗುಣಗಾನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದ್ದು, ಎಚ್‌ಡಿಕೆ ಟ್ರೋಲ್‌ಗೆ ಗುರಿಯಾಗಿದ್ದಾರೆ.

andolanait

Recent Posts

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

3 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

3 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

3 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

3 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

3 hours ago