ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಸ್ ಸೈಲ್ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಶಾಸಕ ಸತೀಶ್ ಸೈಲ್ ವಿಚಾರಣೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸತೀಶ್ ಸೈಲ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ.
ಇದನ್ನು ಓದಿ: ಶಾಸಕ ಸತೀಶ್ ಸೈಲ್ ಜಾಮೀನು ರದ್ದು
ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳ ವಿಚಾರಣೆ ನಡೆಸುತ್ತಿರುವಾಗಲೇ ಮೊದಲ ಆರೋಪಿಯಾಗಿರುವ ಇವರೊಬ್ಬರ ಗೈರನ್ನು ಮನ್ನಿಸಲಾಗದು. ಸತೀಶ್ ಸೈಲ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಬಂಧನ ವಾರಂಟ್ ಹೊರಡಿಸಲಾಗಿದೆ.
ಇನ್ನು ಇಡಿ ದಾಖಲಿಸಿರುವ ಮತ್ತೊಂದು ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿದ್ದ ಸತೀಶ್ ಸೈಲ್ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.





