Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರಂಟ್‌!

ಬೆಂಗಳೂರು : ಮೇಕೆದಾಟು ಪಾದಯಾತ್ರೆ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಮೇಕೆದಾಟು ಯೋಜನೆ ಸಂಬಂಧ ಒ೭ಯ ಪ್ರಕರಣ ಸಂಬಂಧ ಪೊಲೀಸರು ರಾಮಲಿಂಗಾರೆಡ್ಡಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿತಯಾಗಿದ್ದರೂ ರಾಮಲಿಂಗಾರೆಡ್ಡಿ ಅವರು ನ್ಯಾಯಾಲಯಕ್ಕೆ ಹಾಜರಾಗದೆ ಗೈರಾಗಿದ್ದರು.

ಹೀಗಾಗಿ ಜಾಮೀನು ರಹಿತ ವಾರೆಂಟ್ ಜಾರಿಗೆ 42ನೇ ಎಸಿಎಂಎಂ ನ್ಯಾಯಾಧೀಶ ಜೆ.ಪ್ರೀತ್ ಆದೇಶ ಹೊರಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ