ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ತಬಸ್ಸುಮ್ ರಾವ್ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್.29ರಂದು ಪುರಸ್ಕರಿಸಿದ್ದ ಕೋರ್ಟ್ ಅಕ್ಟೋಬರ್.16ರಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿತ್ತು.
ಆದರೆ ಯತ್ನಾಳ್ ನಿನ್ನೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್.28ಕ್ಕೆ ಮುಂದೂಡಿಕೆ ಮಾಡಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ತಬಸ್ಸುಮ್ ರಾವ್ ಎಂಬುವವರು ಯತ್ನಾಳ್ ವಿರುದ್ಧ ದೂರು ನೀಡಿದ್ದರು.
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…