ರಾಜ್ಯ

ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ: ಸಿಎಂ

ಕರ್ನಾಟಕದ ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ದೇಶದಲ್ಲಿಯೇ ಪ್ರಥಮ

ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ.ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ  ಶಾಸಕರುಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ವಿಪಕ್ಷಗಳ ನಾಯಕರೂ ಸೇರಿದಂತೆ ಸುಮಾರು ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್. ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಬಹಳ ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ.

ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ಅವರು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಕುಮಾರಸ್ವಾಮಿಯವರು ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ , ವರದಿಯನ್ನು ಸ್ವೀಕರಿಸಲಿಲ್ಲ ಎಂದರು.

ನಂತರ ಕಾಂತರಾಜು ಅವರ ಅಧ್ಯಕ್ಷರ ಅವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಗಡೆ ಯವರು ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ ಎಂದು ವಿವರಿಸಿದರು.

ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು ತಿಳಿಸಿದಂತೆ, ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆಯನ್ನು ಸ್ವೀಕರಿಸಲಾಗಿದ್ದು, ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago