ರಾಜ್ಯ

ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂಘ ಪರಿವಾರದ ಕೆ.ಎನ್‌ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ತಮ್ಮ ಭಾಗವಹಿಸುವಿಕೆ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಾಗಳಿಗೆ ತೆರೆ ಎಳೆದಿದ್ದಾರೆ.

2025ರ ಜನವರಿ ಮಾಹೆಯಲ್ಲಿ ಕಲಬುರ್ಗಿಯ ಸೇಡಂನಲ್ಲಿ ಭಾರತ ವಿಕಾಸ ಸಂಗಮ ಸಂಸ್ಥೆಯು ʻಭಾರತೀಯ ಸಂಸ್ಕೃತಿ ಉತ್ಸವ-7ʼ ಎಂಬ ಕಾರ್ಯಕ್ರಮವನ್ನು ಆಯೋಜಿಸಿದೆ. ಆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿಯೊಂದಿಗೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಂಘಪರಿವನ್ನು ಸೈದ್ದಾಂತಿಕವಾಗಿ ವಿರೋಧಿಸುವ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ ಎಂಬುದು ಸಾಕಷ್ಟು ವಿರೋಧ, ಆಕ್ಷೇಪ ಹಾಗೂ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.

ಸದ್ಯ ತಮ್ಮ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿರುವ ಸಿಎಂ ಸಿದ್ದರಾಮಯ್ಯ ಅವರು ಸಂಘ ಪರಿವಾರದ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಿದ್ದರಾಮಯ್ಯ, ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

13 mins ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

50 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

59 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago