ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವೆ ಬಂಡೀಪುರ ಮತ್ತು ವಯನಾಡು ನಡುವೆ ರಾತ್ರಿ ಸಂಚಾರ, ಪ್ರಸ್ತುತ ರಾತ್ರಿ 9ರವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿಯೂ ಎರಡೂ ಕಡೆಯಿಂದ 2 ಬಸ್ ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ ವಾಹನಗಳನ್ನು ಪರಿಶೀಲಿಸಿ ಬಿಡಲಾಗುತ್ತಿದೆ. ಹೀಗಾಗಿ ರಾತ್ರಿ ಸಂಚಾರಕ್ಕೆ ಯಾವುದೇ ತೊಡಕಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅರಣ್ಯದೊಳಗೆ ಅಳವಡಿಸಲಾಗಿರುವ ವಿದ್ಯುತ್ ತಂತಿಗಳು ಕೆಲವೆಡೆ ಜೋತು ಬಿದ್ದಿದ್ದು, ಆನೆಗಳು ಸಾವಿಗೀಡಾಗುತ್ತಿವೆ. ವಿದ್ಯುತ್ ತಂತಿ ತೂಗಾಡದಂತೆ ಕ್ರಮ ವಹಿಸಲು ಮತ್ತು ಅಂತರ್ಗತ ಕೇಬಲ್ ಅಳವಡಿಸಿಲು ವಿದ್ಯುತ್ ಕಂಪನಿಗಳಿಗೆ ತಿಳಿಸಿರುವುದಾಗಿ ಹೇಳಿದರು.
ಆನೆಗಳಿಂದ ಬೆಳೆಹಾನಿ ಮತ್ತು ಜೀವಹಾನಿ ಆಗುತ್ತಿದ್ದು, ಇದನ್ನು ತಪ್ಪಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ನಿರ್ಮಿಸಲು ಯೋಜನೆ ರೂಪಿಸಲಾಗತ್ತಿದೆ. ಇದಕ್ಕೆ 100 ಕೋಟಿ ರೂ. ಅಗತ್ಯವಿದ್ದು, ಬಜೆಟ್ ನಲ್ಲಿ ಅನುದಾನ ನೀಡುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.
ಅರಣ್ಯವಾಸಿಗಳ ಸ್ಥಳಾಂತರ:
ರಾಜ್ಯದ ರಾಷ್ಟ್ರೀಯ ಉದ್ಯಾನ, ವನ್ಯಜೀವಿ ಅಭಯಾರಣ್ಯ, ಮೀಸಲು ಅರಣ್ಯ, ಹುಲಿ ಸಂರಕ್ಷಿತ ಅರಣ್ಯ ಸೇರಿದಂತೆ ವಿವಿಧ ಅರಣ್ಯಗಳಲ್ಲಿ ಹಲವಾರು ವರ್ಷಗಳಿಂದ ಅರಣ್ಯವಾಸಿಗಳು ಜೀವಿಸುತ್ತಿದ್ದು, ಗಂಡ, ಹೆಂಡತಿ ಒಳಗೊಂಡು ಪ್ರತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿ ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು ಎಂದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…