ಬೆಂಗಳೂರು: ರಾಜ್ಯಪಾಲರ ಕಛೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ, ಸಂಪುಟ ಸಚಿವರು ಹಾಗೂ ಇಡೀ ಇಂಡಿಯಾ ಒಕ್ಕೂಟ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.
ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಿಎಂ ನಾವಿದ್ದೇವೆ. ಸಿಎಂ ಮೇಲೆ ಯಾವುದೇ ಪ್ರಕರಣ ಇಲ್ಲ. ಅದರೂ ಸಿಎಂ ಮೇಲೆ ಕೇಸ್ ಮಾಡಿದ್ದಾರೆ. ಕಾನೂನು ರೀತಿಯ ಹೋರಾಟ ಮಾಡುತ್ತೇವೆ. ರಾಜಕೀಯವಾಗಿಯೂ ಹೋರಾಟ ಮಾಡುತ್ತೇವೆ. ಈ ಪ್ರಾಸಿಕ್ಯೂಷನ್ ಕಾನೂನಿಗೆ ವಿರುದ್ಧವಾಗಿದೆ ಎಂದು ಹೇಳಿದರು.
78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಮಾಡಿದ್ದೇವೆ. ರಾಜ್ಯಪಾಲರು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವಕ್ಕೆ ಮಾರಕವಾದ ಪತ್ರ ಕಳುಹಿಸಿದ್ದಾರೆ. ರಾಜ್ಯಪಾಲರ 26.7.2024ರ ನೋಟಿಸ್ ಸಂಬಂಧ ಏಪ್ರಿಲ್ 1ರಂದು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದೇವೆ. ಆ ದೂರಿನಲ್ಲಿ ತಿರುಳು ಇಲ್ಲ. ಸಂವಿಧಾನದ ಅಂಶಗಳನ್ನು ತಿಳಿ ತಿಳಿಯಾಗಿ ಹೇಳಿದ್ದೇವೆ. ಇದು ರಾಜಕೀಯ ಪಿತೂರಿ. ಮುಡಾ ಪ್ರಕರಣದಲ್ಲಿ ಯಾವುದೇ ಲೋಪದೋಷ ಆಗಿಲ್ಲ ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದರು.
ಹಿಂದುಳಿದ ವರ್ಗದ ನಾಯಕ ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಬೆಳೆಯುತ್ತಿರುವುದನ್ನು ಸಹಿಸಲಾಗಿದೇ ಕೇಂದ್ರ ಬಿಜೆಪಿ ಸರ್ಕಾರ ದೊಡ್ಡ ಪಿತೂರಿ ನಡೆಸಿದೆ, ಇದನ್ನು ಧಿಕ್ಕರಿಸಿ ನಾವು ಹೋರಾಟ ಮಾಡುತ್ತೇವೆ. ರಾಜ್ಯಪಾರಲ ಕಛೇರಿ ಬಿಜೆಪಿ ಪಕ್ಷದ ಕೈಗೊಂಬೆಯಾಗಬಾರದು ಎಂದರು.
ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಲೋಕಾಯುಕ್ತದಲ್ಲಿ ತನಿಖೆ ನಡೆದಿದೆ. ಅವರ ವಿರುದ್ಧ ಲೋಕಾಯುಕ್ತ, ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಅನುಮತಿ ಕೋರಿ ಮನವಿ ಮಾಡಿದ್ದಾರೆ. ಅಕ್ರಮ ಗಣಿಗಾರಿಕೆ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಮನವಿ ಸಲ್ಲಿಸಿದ್ದರು. ಜನಾರ್ದನ ರೆಡ್ಡಿ, ಜೊಲ್ಲೆ, ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಲಾಗಿತ್ತು. ಅದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆದರೆ ಈ ಪ್ರಕರಣದಲ್ಲಿ ದೂರು ಬಂದ ಒಂದೇ ದಿನದಲ್ಲಿ ರಾಜ್ಯಪಾಲರು ನೋಟಿಸ್ ಕಳುಹಿಸಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 136 ಶಾಸಕರ ಬಲದ ಮತ್ತು ರಾಜ್ಯದ ಜನರ ವಿರುದ್ಧದ ತೀರ್ಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರ ಕಛೇರಿ ದುರ್ಬಳಕೆಯಾಗುತ್ತಿದೆ. ಜೋಶಿ, ಕುಮಾರಸ್ವಾಮಿ ಈ ಸರ್ಕಾರ ಬೀಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಅದಕ್ಕೆ ಪೂರಕವಾಗಿ ಈ ಪೂರ್ವಾನುಮತಿ ನೀಡಲಾಗಿದೆ ಎಂದು ಆರೋಪಿಸಿದರು.
ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…
ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…
ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…
ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…
ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಎಂ…