Mysore
14
broken clouds

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಶಾಸಕರು ಅನುದಾನ ಕೇಳೋದು ತಪ್ಪಲ್ಲ, ನಾನೂ ಕೇಳ್ತೀನಿ: ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಕೇಂದ್ರದಿಂದ ಅನುದಾನ ತಂದು ಸಂಪನ್ಮೂಲ ಹೆಚ್ಚಿಸಿಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಅನುದಾನ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ  ಸಚಿವ ಜಿ.ಪರಮೇಶ್ವರ್‌ ಅವರು, ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ಕೊಡುತ್ತಿದೆ. ಆದ್ರೆ ಕೇಂದ್ರ ಸರ್ಕಾರ ಸರಿಯಾಗಿ ನಮಗೆ ಅನುದಾನ ಕೊಡುತ್ತಿಲ್ಲ. ಕೇಂದ್ರದಿಂದ ಶೀಘ್ರದಲ್ಲೇ ಅನುದಾನ ತಂದು, ನಮ್ಮ ಸಂಪನ್ಮೂಲವನ್ನು ಹೆಚ್ಚಿಸಿಕೊಳ್ಳುತ್ತೇವೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ಕಾರ ಹಾಗೂ ಪಕ್ಷ ತೀರ್ಮಾನ ಕೈಗೊಂಡಿದೆ. ಗ್ಯಾರಂಟಿ ಯೋಜನೆ ಜಾರಿಗೆ ತರೋಕೆ ಕದ್ದು ಮುಚ್ಚಿ ತೀರ್ಮಾನ ಮಾಡಿಲ್ಲ. ಇದರಿಂದ ಜನ ನಮಗೆ ಮತ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಗ್ಯಾರಂಟಿಗಳನ್ನು ಜಾರಿ ಮಾಡೋದು ನಮ್ಮ ಕರ್ತವ್ಯ. ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳಲಿ. ನಾನೂ ಕೂಡ ಅನುದಾನ ಕೇಳುತ್ತೇನೆ. ಸರ್ಕಾರ ಅನುದಾನ ಕೊಡುತ್ತಿದ್ದು, ಯಾವ ಕಾರ್ಯಕ್ರಮಗಳು ನಿಂತಿಲ್ಲ. ರಾಜ್ಯ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು.

 

Tags:
error: Content is protected !!