ಬೆಂಗಳೂರು: ಕೇಂದ್ರದಿಂದ ಅನುದಾನ ತಂದು ಸಂಪನ್ಮೂಲ ಹೆಚ್ಚಿಸಿಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಅನುದಾನ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ಕೊಡುತ್ತಿದೆ. ಆದ್ರೆ ಕೇಂದ್ರ ಸರ್ಕಾರ ಸರಿಯಾಗಿ ನಮಗೆ ಅನುದಾನ ಕೊಡುತ್ತಿಲ್ಲ. ಕೇಂದ್ರದಿಂದ ಶೀಘ್ರದಲ್ಲೇ ಅನುದಾನ ತಂದು, ನಮ್ಮ ಸಂಪನ್ಮೂಲವನ್ನು ಹೆಚ್ಚಿಸಿಕೊಳ್ಳುತ್ತೇವೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ಕಾರ ಹಾಗೂ ಪಕ್ಷ ತೀರ್ಮಾನ ಕೈಗೊಂಡಿದೆ. ಗ್ಯಾರಂಟಿ ಯೋಜನೆ ಜಾರಿಗೆ ತರೋಕೆ ಕದ್ದು ಮುಚ್ಚಿ ತೀರ್ಮಾನ ಮಾಡಿಲ್ಲ. ಇದರಿಂದ ಜನ ನಮಗೆ ಮತ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಗ್ಯಾರಂಟಿಗಳನ್ನು ಜಾರಿ ಮಾಡೋದು ನಮ್ಮ ಕರ್ತವ್ಯ. ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳಲಿ. ನಾನೂ ಕೂಡ ಅನುದಾನ ಕೇಳುತ್ತೇನೆ. ಸರ್ಕಾರ ಅನುದಾನ ಕೊಡುತ್ತಿದ್ದು, ಯಾವ ಕಾರ್ಯಕ್ರಮಗಳು ನಿಂತಿಲ್ಲ. ರಾಜ್ಯ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…