ರಾಜ್ಯ

ಮಲೆ ಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗುತ್ತಿದ್ದು, ಈ ಕಾನನ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಅರಣ್ಯ ಪಡೆ ಮುಖ್ಯಸ್ಥರು, ಮುಖ್ಯ ವನ್ಯಜೀವಿ ಪರಿಪಾಲಕರು ಸೇರಿದಂತೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಎಂ.ಎಂ.ಹಿಲ್ಸ್ ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಮಾಡಲು ಕ್ರಮ ವಹಿಸುವಂತೆ ಹಾಗೂ ಎಲ್ಲರನ್ನು ಸಭೆ ಕರೆದು ಚರ್ಚಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ರಾಜ್ಯದಲ್ಲಿ ವನ್ಯಜೀವಿಗಳ ಅಸಹಜ ಸಾವನ್ನು ನಿಯಂತ್ರಿಸಲು ಮತ್ತು ವನ್ಯ ಮೃಗಗಳ ದಾಳಿಯಿಂದ ಅಮೂಲ್ಯ ಜೀವಹಾನಿ ಆಗುವುದನ್ನು ತಡೆಯಲು ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ, ಆಯಾ ವಲಯದಲ್ಲಿ ಅಧಿಕಾರಿ, ಸಿಬ್ಬಂದಿಗೆ ಹೊಣೆಗಾರಿಕೆ ನಿಗದಿಪಡಿಸುವಂತೆ ನಿರ್ದೇಶನ ನೀಡಿದರು.

ಆಂದೋಲನ ಡೆಸ್ಕ್

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 mins ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

2 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

3 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

8 hours ago