ಬೆಂಗಳೂರು: ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಡಿಸೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಈ ಕುರಿತು ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ಸ್ವಾಮೀಜಿ ಅವರಿಗೆ ಇಂದು (ನ.29) ಉಪ್ಪಾರಪೇಟೆ ಠಾಣೆಯ ಪೊಲೀಸರು ಡಿಸೆಂಬರ್ 2 ರಂದು ಬೆಳಿಗ್ಗೆ 11 ಗಂಟೆಯ ವೇಳೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ವಕ್ಫ್ ಮಂಡಳಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿ ಮುಸ್ಲಿಮರ ಮತದಾನ ಹಕ್ಕು ಮೊಟಕುಗೊಳಿಸುವಂತೆ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಏನಿದು ಪ್ರಕರಣ?
ಚಂದ್ರಶೇಖರನಾಥ ಸ್ವಾಮೀಜಿ ಅವರು ಇತ್ತೀಚೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ವಕ್ಫ್ ಮಂಡಳಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯೂ ರಾಜ್ಯಾದ್ಯಾಂತ ಭಾರಿ ಚರ್ಚೆಗೆ ಗ್ರಾಸವಾಗಿ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಸಂಬಂಧ ಪೊಲೀಸರು ಇಂದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿ ಮಾಡಿದ್ದಾರೆ.
ಮೈಸೂರು: ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…