ಬೆಂಗಳೂರು: ಬಿಜೆಪಿ ಹೈಕಮಾಂಡ್ ಶಿಸ್ತು ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎರಡನೇ ಬಾರಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ರಾಜ್ಯ ಬಿಜೆಪಿಯಲ್ಲಿ ಬಣಗಳ ಬಡಿದಾಟ ಜೋರಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆ ಮುನ್ನವೇ ಬಿಜೆಪಿ ಹೈಕಮಾಂಡ್ ಇಂದು(ಫೆಬ್ರವರಿ.10) ಯತ್ನಾಳ್ ಅವರಿಗೆ ಕೇಂದ್ರ ಶಿಸ್ತು ಸಮಿತಿಯಿಂದ ಎರಡನೇ ಬಾರಿಗೆ ಶೋಕಾಸ್ ನೋಟಿಸ್ ನೀಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅನಗತ್ಯವಾಗಿ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದರು. ಹೀಗಾಗಿ ಬಿಜೆಪಿ ಹೈಕಮಾಂಡ್ ಸೂಚನೆಯಿಂದ ಬಿಜೆಪಿ ಶಿಸ್ತು ಸಮಿತಿಯು ಶಾಸಕ ಯತ್ನಾಳ್‌ಗೆ ನೋಟಿಸ್ ನೀಡಿದ್ದು, ಈ ನೋಟಿಸ್‌ನಿಂದ ಶಾಸಕ ಯತ್ನಾಳ್ ಬಣಕ್ಕೆ ಬಿಗ್ ಶಾಕ್ ಕೊಟ್ಟಿದೆ.
ಇನ್ನು ಈ ಹಿಂದೆ ನೋಟಿಸ್ ನೀಡಿದ್ರೂ ಮತ್ತೆ ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆ ಮತ್ತೊಂದು ಶೋಕಸ್ ನೋಟಿಸ್ ನೀಡಲಾಗಿದೆ . ನಿಗದಿತ ಕಾಲಮಿತಿಯೊಳಗೆ ಉತ್ತರ ನೀಡದಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶೋಕಾಸ್ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.