ರಾಜ್ಯ

ಬಿಜೆಪಿ ಹೈಕಮಾಂಡ್‌ನಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ 2ನೇ ಬಾರಿನೋಟಿಸ್‌

ಬೆಂಗಳೂರು: ಬಿಜೆಪಿ ಹೈಕಮಾಂಡ್‌ ಶಿಸ್ತು ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಎರಡನೇ ಬಾರಿ ಶೋಕಾಸ್‌ ನೋಟಿಸ್‌ ಜಾರಿ ಮಾಡಲಾಗಿದೆ.

ರಾಜ್ಯ ಬಿಜೆಪಿಯಲ್ಲಿ ಬಣಗಳ ಬಡಿದಾಟ ಜೋರಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆ ಮುನ್ನವೇ ಬಿಜೆಪಿ ಹೈಕಮಾಂಡ್‌ ಇಂದು(ಫೆಬ್ರವರಿ.10) ಯತ್ನಾಳ್‌ ಅವರಿಗೆ ಕೇಂದ್ರ ಶಿಸ್ತು ಸಮಿತಿಯಿಂದ ಎರಡನೇ ಬಾರಿಗೆ ಶೋಕಾಸ್‌ ನೋಟಿಸ್‌ ನೀಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಅನಗತ್ಯವಾಗಿ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದರು. ಹೀಗಾಗಿ ಬಿಜೆಪಿ ಹೈಕಮಾಂಡ್ ಸೂಚನೆಯಿಂದ ಬಿಜೆಪಿ ಶಿಸ್ತು ಸಮಿತಿಯು ಶಾಸಕ ಯತ್ನಾಳ್‌ಗೆ ನೋಟಿಸ್‌ ನೀಡಿದ್ದು, ಈ ನೋಟಿಸ್‌ನಿಂದ ಶಾಸಕ ಯತ್ನಾಳ್‌ ಬಣಕ್ಕೆ ಬಿಗ್‌ ಶಾಕ್‌ ಕೊಟ್ಟಿದೆ.

ಇನ್ನು ಈ ಹಿಂದೆ ನೋಟಿಸ್ ನೀಡಿದ್ರೂ ಮತ್ತೆ ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆ ಮತ್ತೊಂದು ಶೋಕಸ್ ನೋಟಿಸ್ ನೀಡಲಾಗಿದೆ . ನಿಗದಿತ ಕಾಲಮಿತಿಯೊಳಗೆ ಉತ್ತರ ನೀಡದಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶೋಕಾಸ್ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

15 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

15 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

16 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

18 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

18 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

22 hours ago