ರಾಜ್ಯ

ಹಸುಗಳ ಮೇಲೆ ಕ್ರೌರ್ಯ ಎಸಗುತ್ತಿರುವ ವ್ಯಕ್ತಿಗಳ ಹಿನ್ನೆಲೆ ಪರಿಶೀಲನೆಗೆ ಸೂಚನೆ: ಸಚಿವ ಪರಮೇಶ್ವರ್‌

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹಸುಗಳ ಮೇಲೆ ಕಿಡಿಗೇಡಿಗಳ ಕ್ರೌರ್ಯ ಹೆಚ್ಚಾಗುತ್ತಿದ್ದು, ಕ್ರೌರ್ಯ ಎಸಗುತ್ತಿರುವ ವ್ಯಕ್ತಿಗಳ ಹಿನ್ನೆಲೆ ಪರಿಶೀಲನೆ ಮಾಡಲು ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಇಂತಹ ಘಟನೆ ಆಗದಂತೆ ಏನಾದರೂ ಉಪಾಯ ಕಂಡು ಹಿಡಿಯಬೇಕಾಗಿದೆ.

ಈ ಪ್ರಕರಣಗಳ ಕುರಿತು ಇಂದು ಬೆಳಿಗ್ಗೆ ಹಿರಿಯ ಅಧಿಕಾರಿಗಳ ಜೊತೆ ಗಂಭೀರವಾಗಿ ಚರ್ಚೆ ಮಾಡಿದ್ದೇನೆ. ಯಾರು ಈ ರೀತಿಯ ಮನಸ್ಥಿತಿಯವರು ಇದ್ದಾರೋ ಅಂತಹವರನ್ನು ಪತ್ತೆ ಹಚ್ಚಬೇಕು. ಇಂತಹ ಕೃತ್ಯಗಳು ಸಂಘಟನೆಯಿಂದ ಮಾಡ್ತಾ ಇರೋದಾ? ಅಥವಾ ಏಕಾಂಗಿಯಾಗಿ ಮಾಡಿರೋದಾ? ಯಾರ ಪ್ರಚೋದನೆಯಿಂದ ಆಗ್ತಿದೆಯಾ? ಎಂದು ತನಿಖೆಗೆ ಸೂಚನೆ ನೀಡಿದ್ದೇನೆ. ಇದರ ಬಗ್ಗೆ ಪರಿಶೀಲನೆ ಮಾಡಿ ಇದಕ್ಕೆ ಕಡಿವಾಣ ಹಾಕುವ ಕೆಲಸ ಮಾಡ್ತೀವಿ ಎಂದು ತಿಳಿಸಿದರು.

ಇನ್ನು ಸೆಂಟ್ರಲ್‌ ಜೈಲು ವಿಭಜನೆ ಕುರಿತು ಮಾತನಾಡಿದ ಅವರು, ವಿಭಜನೆ ಮಾಡುವ ಪ್ರಸ್ತಾಪ ಸದ್ಯ ಸರ್ಕಾರದ ಮುಂದೆ ಇಲ್ಲ. ಆದರೆ ಬಂಧಿಖಾನೆಗಳನ್ನು ಬಿಗಿ ಮಾಡಬೇಕು ಎಂದು ನಿರ್ಧಾರ ಮಾಡಿದ್ದೇವೆ. ಸೆಕ್ಯುರಿಟಿಯನ್ನು ಮತ್ತಷ್ಟು ಜಾಸ್ತಿ ಮಾಡಬೇಕು ಎಂದು ನಿರ್ಧಾರ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

2 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

4 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

5 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

5 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

6 hours ago