ರಾಜ್ಯ

ರಾಹುಲ್‌ ಗಾಂಧಿಗೆ ನೋಟಿಸ್‌: ಚುನಾವಣಾ ಆಯೋಗದವನ್ನೇ ಪ್ರಶ್ನಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ನೋಟಿಸ್‌ ನೀಡಲು ಅಧಿಕಾರವಿದೆಯೇ ಹೊರತು ಅವರಿಗೆ ಇಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್‌ ನೀಡುವ ಹಕ್ಕಿಲ್ಲ. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯಲ್ಲಿ ಕೆಲವು ಖಾಲಿ ಟ್ರಂಕುಗಳಿವೆ. ಬರೀ ಶಬ್ಧ ಮಾಡುವವರಿಗೂ ನಾನು ಎಲ್ಲಾ ಮಾಹಿತಿ ತಿಳಿಸಿಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ ಯಾರೊಬ್ಬರು ಅನುದಾನ ತಂದಿಲ್ಲ. ತರಲು ಆಸಕ್ತಿಯನ್ನೂ ತೋರಿಲ್ಲ ಎಂದು ಬಿಜೆಪಿ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಮಾತನಾಡಿದೆ. ಅವರು ನಮ್ಮ ಮನವಿಯನ್ನು ಗಮನಿಸುವುದಾಗಿ ಹೇಳಿದ್ದಾರೆ. ಬೆಂಗಳೂರು ಜಾಗತಿಕ ನಗರ ಎನ್ನುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಆದ್ದರಿಂದಲೇ ಅವರು ಬೆಂಗಳೂರು ಭಾರತವನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

5 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

13 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

13 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

13 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

14 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

14 hours ago