ರಾಜ್ಯ

ಸಾರಿಗೆ ನೌಕರರಿಗೆ ನೋಟಿಸ್:‌ ರಾಜ್ಯ ಸರ್ಕಾರಕ್ಕೆ ಜಂಟಿಕ್ರಿಯಾ ಸಮಿತಿ ಎಚ್ಚರಿಕೆ

ಬೆಂಗಳೂರು: ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ನೋಟಿಸ್‌‍ ನೀಡುತ್ತಿರುವುದನ್ನು ನಿಲ್ಲಿಸದೇ ಇದ್ದರೆ, ಎಲ್ಲಾ ಡಿಪೋಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಂಟಿಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ.

ನಿನ್ನೆ ಹೈಕೋರ್ಟ್‌ನ ಆದೇಶದ ಹಿನ್ನೆಲೆಯಲ್ಲಿ ಮುಷ್ಕರವನ್ನು ಸಾರಿಗೆ ನಿಗಮಗಳ ನೌಕರರ ಜಂಟಿಕ್ರಿಯಾ ಸಮಿತಿ ಮುಂದೂಡಿದೆ. ನಾಳೆ ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯಲಿದ್ದು, ಜಂಟಿಕ್ರಿಯಾ ಸಮಿತಿ ಮುಖಂಡರು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ನಿನ್ನೆ ಸಂಜೆಯಿಂದಲೇ ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರರು ಹಾಗೂ ಸಿಬ್ಬಂದಿಗೆ ಸಾರಿಗೆ ನಿಗಮಗಳು ನೋಟಿಸ್‌‍ ನೀಡಲಾರಂಭಿಸಿವೆ. ಮುಷ್ಕರದಲ್ಲಿ ಭಾಗಿಯಾಗಿದ್ದವರನ್ನು ಕೆಲಸದಿಂದ ವಜಾಗೊಳಿಸುವ ಬೆದರಿಕೆ ಹಾಕಲಾಗುತ್ತಿದೆ.

ಜಂಟಿಕ್ರಿಯಾ ಸಮಿತಿಯನ್ನು ನಂಬಿ ಮುಷ್ಕರದಲ್ಲಿ ಭಾಗಿಯಾಗಿದ್ದ ಸಾವಿರಾರು ಮಂದಿ ಈಗ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ನಿಗಮಗಳ ಹಿರಿಯ ಅಧಿಕಾರಿಗಳು ವಾಟ್ಸ್‌ಆ್ಯಪ್‌ ಮೂಲಕವೇ ನೋಟಿಸ್‌‍ಗಳನ್ನು ಕಳುಹಿಸಿ ತ್ವರಿತ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡುತ್ತಿದ್ದಾರೆ.

ಸರ್ಕಾರಕ್ಕೆ 22 ದಿನಗಳ ಮುಂಚಿತವಾಗಿಯೇ ನೋಟಿಸ್‌‍ ನೀಡಿ, ನಾವು ಮುಷ್ಕರ ನಡೆಸಿದ್ದೇವೆ. ನಿಯಮ ಬಾಹಿರವಾಗಿ ಯಾವುದೇ ಹೆಜ್ಜೆ ಇಟ್ಟಿಲ್ಲ ಎಂಬ ಸಮರ್ಥನೆಯನ್ನು ಜಂಟಿಕ್ರಿಯಾ ಸಮಿತಿಯ ಮುಖಂಡರು ನೀಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

5 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

5 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

5 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

7 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

9 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

14 hours ago