ರಾಜ್ಯ

ಯತ್ನಾಳ್‌ಗೆ ನೋಟಿಸ್‌ ನೀಡಿದ್ದಕ್ಕೆ ನನಗೆ ನೋವು ಇಲ್ಲ, ಖುಷಿನೂ ಇಲ್ಲ: ಎಂಪಿ ರೇಣುಕಾಚಾರ್ಯ

ದಾವಣಗೆರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಕೇಂದ್ರೀಯ ಶಿಸ್ತು ಸಮಿತಿಯು ನೀಡಿರುವ ಶೋಕಾಸ್‌ ನೋಟಿಸ್‌ ಬಗ್ಗೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯಿಸಿ, ನೋಟಿಸ್‌ ನೀಡಿರುವುದಕ್ಕೆ ನನಗೆ ನೋವು ಇಲ್ಲ ಹಾಗೆಯೇ ಖುಷಿನೂ ಇಲ್ಲ ಎಂದಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕತ್ವದ ವಿರೋಧಿ ಹೇಳಿಕೆಗಳು ಪಕ್ಷದ ವರ್ಚಸ್ಸಿಗೆ ಹಾನಿಮಾಡುತ್ತವೆ. ಇಂತಹ ಹೇಳಿಕೆ ನೀಡುವಲ್ಲಿ ಯತ್ನಾಳ್‌ ಟೀಮ್‌ ತೊಡಗಿದೆ. ತಾವು ಹಿರಿಯರು ಎನ್ನುವುದನ್ನು ಮರೆತು ವಿಜಯೇಂದ್ರ ಚಿಕ್ಕವರು ಎಂದು ನಿಂದಿಸಿದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಯತ್ನಾಳ್‌ ನಮ್ಮ ಮೇಲೆ ಹೊಂದಾಣಿಕೆ ರಾಜಕಾರಣದ ಆರೋಪ ಮಾಡುತ್ತಿದ್ದಾರೆ. ನನ್ನಿಂದಲೇ ಎಲ್ಲಾ ಎನ್ನುವ ಮನೋಭಾವ ಒಳ್ಳೆಯದಲ್ಲ. ಪಕ್ಷದ ಅಧ್ಯಕ್ಷರು ಚಿಕ್ಕವರೇ ಆಗಿದ್ದರೂ ರಾಜ್ಯ ರಾಜಕೀಯದ ಆಡಳಿತದಲ್ಲಿ ಮುಖ್ಯವಾಗುತ್ತಾರೆ. ಹಿರಿತನದ ಮೇಲೆ ಚಿಕ್ಕವರನ್ನು ನಿಂದಿಸಬಾರದು, ಕೇಂದ್ರದ ನಾಯಕರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದರು.

ವಿಜಯೇಂದ್ರ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದರು ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಪ್ರಧಾನಿ ಮೋದಿರನ್ನೂ ಭೇಟಿಯಾಗಿದ್ದರು. ಹಾಗಂತ ಅವರ ಮಧ್ಯೆ ಹೊಂದಾಣಿಕೆಯಿದೆ ಎಂದು ಹೇಳಿದರೆ ಹೇಗೆ? ರಾಜ್ಯದ ಅಭಿವೃದ್ದಿ ವಿಷಯವಾಗಿ ಚರ್ಚಿಸಿರಬಹುದು. ಏನೇ ಭಿನ್ನಮತ ಇದ್ದರೂ ಪಕ್ಷದ ಒಳಗೆ ಸರಿಪಡಿಸಿಕೊಂಡರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

5 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

6 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

6 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

6 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

6 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

7 hours ago