ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಹೈಕಮಾಂಡ್ ನೋಟಿಸ್ ನೀಡಿದೆ.
ಈ ಕುರಿತು ಯತ್ನಾಳ್‌ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನೋಟಿಸ್ ಹೊರಡಿಸಲಾಗಿದೆ. ಈ ಮೂಲಕ ಕೊನೆಗೂ ಹೈಕಮಾಂಡ್ ಮಧ್ಯಪ್ರವೇಶಿಸಿ ರಾಜ್ಯಾದ್ಯಾಂತ ನಡೆಯುತ್ತಿರುವ ಬಿಜೆಪಿ v/s ಬಿಜೆಪಿ ಬಣಗಳ ಭಿನ್ನಮತ ಗುದ್ದಾಟಕ್ಕೆ ತೆರೆ ಎಳೆಯಲು ನಿರ್ಧರಿಸಿದೆ.
ಶಾಸಕ ಯತ್ನಾಳ್ ಬಣ ಅವರ ಬಣ ವಕ್ಫ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಪದಚ್ಯುತಿಗೆ ಒತ್ತಾಯಿಸಿದ್ದರು. ಆದರೆ ವಿಜಯೇಂದ್ರ ಬಣ ಯತ್ನಾಳ್ ವಿರುದ್ಧ ಕಿಡಿಕಾರಿದ್ದು, ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಹಾಗೂ ಹೈಕಮಾಂಡ್ ನಾಯಕರಿಗೆ ಮನವಿ ಮಾಡಿದ್ದರು. ಆದರೆ ಇದೀಗ ಬಿಜೆಪಿ ಹೈಕಮಾಂಡ್ ಮಧ್ಯಪ್ರವೇಶಿಸಿ ಬಣಗಳ ಜಿದ್ದಾ-ಜಿದ್ದಿ ಹೋರಾಟಕ್ಕೆ ತೆರೆ ಎಳೆಯಲು ತೀರ್ಮಾನಿಸಿದ್ದು, ಬಿಜೆಪಿ ನಾಯಕರನ್ನು ಒಂದುಗೂಡಿಸಲು ಪ್ರಯತ್ನಿಸುತ್ತಿದೆ.





