ರಾಜ್ಯ

ಶೀಘ್ರ 3600 ಸಿಬ್ಬಂದಿ ನೇಮಕಾತಿಗೆ ಅಧಿಸೂಚನೆ : ಪರಮೇಶ್ವರ್‌

ಬೆಳಗಾವಿ : ಶೀಘ್ರದಲ್ಲೇ 3600 ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್‌ಗೆ ತಿಳಿಸಿದ್ದಾರೆ.

ಸದಸ್ಯ ಜಗದೇವ್ ಗುತ್ತೆದಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬೇಕೆಂಬ ಉದ್ದೇಶವಿತ್ತು. ಆದರೆ ಎಸ್ಸಿ-ಎಸ್ಟಿ ಒಳಮೀಸಲಾತಿ ವಿವಾದ ಹೈಕೋರ್ಟ್‌ನಲ್ಲಿದ್ದರಿಂದ ವಿಳಂಬವಾಗಿತ್ತು. ಇದು ಇತ್ಯರ್ಥವಾಗುವವರೆಗೂ ನೇಮಕಾತಿ ಮಾಡಬಾರದೆಂದು ಹೈಕೋರ್ಟ್ ಸೂಚನೆ ನೀಡಿತ್ತು. ಹಾಗಾಗಿ ವಿಳಂಬವಾಗಿದೆ ಎಂಬುದನ್ನು ಒಪ್ಪಿಕೊಂಡರು.

ಬುಧವಾರವಷ್ಟೆ ವಿಧಾನಸಭೆಯಲ್ಲಿ ಎಸ್ಸಿ-ಎಸ್ಟಿ ಒಳಮೀಸಲಾತಿ ಸಂಬಂಧ ವಿಧೇಯಕವನ್ನು ಮಂಡಿಸಿದ್ದೇವೆ. ಈಗ ನಮಗೆ ಯಾವುದೇ ಕಾನೂನು ತೊಡಕು ಎದುರಾಗುವುದಿಲ್ಲ. ೩೬೦೦ ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುತ್ತೇವೆ. ಇದಕ್ಕೆ ಹಣಕಾಸು ಇಲಾಖೆ ಅನುಮತಿ ಕೊಟ್ಟಿದೆ ಎಂದು ತಿಳಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ೧೬೭ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ನಾವು ಪ್ರಣಾಳಿಕೆಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದೆವು. ಅದರಂತೆ ಹಂತ ಹಂತವಾಗಿ ಖಾಲಿ ಇರುವ ಕಡೆ ಭರ್ತಿ ಮಾಡಿಕೊಳ್ಳುತ್ತೇವೆ ಎಂದರು.

ಇದನ್ನೂ ಓದಿ:-ಪ್ರತಿಭಟನೆ ವೇಳೆ ಮಹಿಳಾ ASIನ ಚಿನ್ನದ ಸರ ಎಗರಿಸಿದ ಖದೀಮರು

ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲು ನಮಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಎಸ್ಸಿಎಸ್ಟಿ ಒಳಮೀಸಲಾತಿ ಜಾರಿ ಮಾಡಿದ ಪರಿಣಾಮ ಕೆಲವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದರು. ನ್ಯಾಯಾಲಯವು ಪ್ರಕರಣ ಇತ್ಯರ್ಥ ಆಗುವವರೆಗೂ ನೇಮಕಾತಿ ಬೇಡ ಎಂದು ಆದೇಶ ಮಾಡಿದೆ. ಅದನ್ನು ಮೀರಿ ನಾವು ಹೇಗೆ ನೇಮಕಾತಿ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ೨೮ ಪೊಲೀಸ್ ಠಾಣೆಗಳಿಗೆ ೧೧೨೫ ಹುದ್ದೆಗಳು ಮಂಜೂರಾಗಿದೆ. ಇದರಲ್ಲಿ ೧೨೬ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ೧೪೬ ಖಾಲಿ ಇವೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನಮ ಸರ್ಕಾರ ಪ್ರತಿ ವರ್ಷ ೫ ಸಾವಿರ ಕೋಟಿ ಅನುದಾನ ನೀಡುತ್ತಿದ್ದೇವೆ. ಇದರಲ್ಲಿ ನಮ ಇಲಾಖೆಗೂ ಅನುದಾನ ನೀಡಬೇಕೆಂದು ಮನವಿ ಮಾಡಿದ್ದೆವು. ೫೦ ಕೋಟಿ ಅನುದಾನ ನೀಡಲು ಸೂಚಿಸಿದ್ದಾರೆ. ಇದರಲ್ಲಿ ಎಲ್ಲೆಲ್ಲಿ ಅಗತ್ಯವಿರುತ್ತದೆಯೋ ಅಂಥ ಕಡೆ ಪೊಲೀಸ್ ಠಾಣೆಗಳು, ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦…

2 hours ago

ಮುಡಾ ಅಕ್ರಮ : ತೆರೆಗೆ ಸರಿದ ದೇಸಾಯಿ ಆಯೋಗದ ವರದಿ

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…

2 hours ago

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

14 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

14 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

14 hours ago